ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಎಸ್ಐಟಿಗೆ ವಹಿಸುವಂತೆ ಆಗ್ರಹಿಸಿ ಜ.20 ರಂದು ಹಾವೇರಿಯಲ್ಲಿ ಪ್ರತಿಭಟನೆ: ಬಸವರಾಜ ಬೊಮ್ಮಾಯಿ

Update: 2024-01-18 07:40 GMT

ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಎಎಸ್ಐಗೆ ವಹಿಸುವಂತೆ ಜ.20 ಹಾವೇರಿಯ ಎಸ್ಪಿ ಕಚೇರಿ ಎದುರು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಅನೇಕ ನಾಯಕರು ಹಾಗೂ ಜಿಲ್ಲಾ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಹಾವೇರಿಯಲ್ಲಿ ನೈತಿಕ ಪೊಲಿಸ್ ಗಿರಿ ಮಾಡಿ ಸಾಮೂಹಿಕ ಅತ್ಯಾಚಾರ ಮಾಡಿರುವ ಪ್ರಕರಣವನ್ನು ಪೊಲಿಸರು ಮುಚ್ಚಿ ಹಾಕುವ ಯತ್ನ ಮಾಡಿದ್ದರು. ಹಾವೇರಿ ಎಸ್ಪಿ, ಗೃಹಸಚಿವರು ಅದನ್ನು ಒಪ್ಪಿಕೊಳ್ಳಲು ಸಿದ್ದರಿರಲಿಲ್ಲ. ಆದರೆ, ಈಗ ಹಾನಗಲ್ ಪೊಲಿಸರನ್ನು ಅವರೇ ಅಮಾನತು ಮಾಡಿದ್ದಾರೆ‌. ಹೀಗಾಗಿ ಪೊಲಿಸರಿಂದ ಲೋಪವಾಗಿರುವುದನ್ನು ಒಪ್ಪಿಕೊಂಡಂತಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯಲ್ಲಿ ಕಾಪಾಡುವಲ್ಲಿ ರಾಜಕಾರಣ ಬಹಳ ಪಾತ್ರ ವಹಿಸುತ್ತಿದೆ. ಹಾನಗಲ್ ಪೊಲಿಸರು ಕಾನೂನು ಪ್ರಕಾರ ನಡೆದುಕೊಂಡಿಲ್ಲ. ಆ ಹೆಣ್ಣು ಮಗಳಿಗೆ ಸರಿಯಾದ ಚಕಿತ್ಸೆ ನೀಡುತ್ತಿಲ್ಲ. ಈ ಬಗ್ಗೆ ಸಿಎಂ ಕೂಡ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಹೀಗಾಗಿ ಎಸ್ಐಟಿ ತನಿಖೆ ನಡೆಸುವಂತೆ ಆಗ್ರಹಿಸಿ ಜ.20 ರಂದು ಹಾವೇರಿ ಎಸ್ಪಿ ಕಚೇರಿ ಎದುರು ಪ್ರತಿಭಟನೆ ಮಾಡಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.

ಸಿಎಂಗೆ ಮೋದಿ ಫೋಬಿಯಾ

ಸಿಎಂ ಸಿದ್ದರಾಮಯ್ಯ ಅವರಿಗೆ ಮೋದಿ ಫೋಬಿಯಾ ಇದೆ.‌ ಇಡಿ ದೇಶದಲ್ಲಿ ಪ್ರಧಾನಿ ನರೇಂದ್ರ ಮೊದಿ ದಕ್ಷ ಆಡಳಿತ ನೀಡುತ್ತಿದ್ದಾರೆ. ಎಲ್ಲ ರೀತಿಯ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ‌. ಮತ್ತೆ ಮೂರನೆ ಬಾರಿಗೆ ಪ್ರಧಾನಿ ಆಗಲಿದ್ದಾರೆ. ಹೀಗಾಗಿ ಅದನ್ನು ಸಹಿಸಿಕೊಳ್ಳಲಾಗದೇ ಸಿದ್ದರಾಮಯ್ಯ ಅವರ ವಿರುದ್ದ ಅನಗತ್ಯ ಆರೋಪ ಮಾಡುತ್ತಾರೆ ಎಂದರು.

ಸಿಎಂ ನಮ್ಮ ಐಟಿ ಸೆಲ್ ಹುಡುಗರ ಜೊತೆ ಚರ್ಚಿಸಲಿ

ಕೇಂದ್ರದ ಅನುದಾನದ ಕುರಿತು ಪ್ರಧಾನಿ ನರೇಂದ್ರ ಮೋದಿ ಜೊತೆ ಬಹಿರಂಗ ಚರ್ಚೆಗೆ ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಬೊಮ್ಮಾಯಿ, ಸಿಎಂಗೆ ಪ್ರಧಾನಿ ಜೊತೆ ಚರ್ಚೆ ಮಾಡಲು ಆಗಲ್ಲ ಅನ್ನುವುದು ಗೊತ್ತಿದೆ. ಅವರು ಮೊದಲು ನಮ್ಮ ಐಟಿ ಸೆಲ್ ಹುಡುಗರ ಜೊತೆ ಚರ್ಚೆ ಮಾಡಲಿ. ನಮ್ಮ ಐಟಿ ಸೆಲ್ ಹುಡುಗರು ಎಲ್ಲ ಮಾಹಿತಿ ಇಟ್ಟುಕೊಂಡಿದ್ದಾರೆ ಎಂದು ತಿರುಗೇಟು ನೀಡಿದರು.

ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು

ಸಂಸದ ಅನಂತಕುಮಾರ್ ಹೆಗಡೆ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಯಾರೂ ಅವರನ್ನು ಸಮರ್ಥನೆ ಮಾಡಿಕೊಳ್ಳುತ್ತಿಲ್ಲ. ಯಾರದಾದರೂ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಬೇಕು. ಸಿಎಂ ಸಿದ್ದರಾಮಯ್ಯ ಅವರು ಭೂಮಿ ಮೇಲೆ ಇರುವ ಎಲ್ಲರ ಬಗ್ಗೆಯೂ ಏಕ ವಚನದಲ್ಲಿ ಮಾತನಾಡುತ್ತಾರೆ. ಆದರೆ, ಅವರ ಬಗ್ಗೆ ಬೇರೆಯವರು ಮಾತನಾಡಿದರೆ ಅದು ತಪ್ಪು ಎನ್ನುತ್ತಾರೆ. ಅದೇ ಈಗ ಪ್ರಶ್ನೆಯಾಗಿದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News