ಪಿಎಸ್ಐ ಅನುಮಾನಾಸ್ಪದ ಸಾವು ಪ್ರಕರಣ | ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರಕಾರ ಆದೇಶ

Update: 2024-08-03 15:27 GMT

ಪಿಎಸ್‍ಐ ಪರಶುರಾಮ್

ಬೆಂಗಳೂರು: ಯಾದಗಿರಿ ನಗರ ಠಾಣೆ ಪಿಎಸ್‍ಐ ಪರಶುರಾಮ್ ಅವರ ಸಾವು ಹಲವು ಅನುಮಾನಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾಯಿಸಿ ರಾಜ್ಯ ಸರಕಾರ ಆದೇಶಿಸಿದೆ.

ಪಿಎಸ್‍ಐ ಪರಶುರಾಮ್ ಪತ್ನಿ ಶ್ವೇತಾ ಅವರು ನೀಡಿದ ದೂರನ್ನು ಆಧರಿಸಿ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್, ಪುತ್ರ ಪಂಪನಗೌಡ ಎಂಬುವರ ವಿರುದ್ಧ ಜಾತಿ ನಿಂದನೆ ಆರೋಪದಡಿ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಸರಕಾರ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಸಿಐಡಿಗೆ ವರ್ಗಾಯಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News