ಪಿಎಸ್ಐ ನೇಮಕಾತಿ ಹಗರಣ; ನ್ಯಾಯಾಂಗ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

Update: 2023-07-22 07:26 GMT

ಬೆಂಗಳೂರು: ಈ ಹಿಂದೆ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಭಾರೀ ಸದ್ದು ಮಾಡಿದ್ದ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಿ ಆದೇಶ ಹೊರಡಿಸಿದೆ.

ಈ ವಿಚಾರವಾಗಿ ಅಂದಿನ ಗೃಹ ಮಂತ್ರಿ ಆರಾಗ ಜ್ಞಾನೇಂದ್ರ ಅವರ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಮಾಡಿದ್ದ ಕಾಂಗ್ರೆಸ್, ನಾವು ಅಧಿಕಾರಕ್ಕೆ ಬಂದರೆ ಹಗರಣದ ತನಿಖೆ ನಡೆಸುವುದಾಗಿ ಹೇಳಿತ್ತು.

ಈ ಬಗ್ಗೆ ಅಧಿಕೃತವಾಗಿ ಟ್ವಿಟರ್ ಮೂಲಕ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, ಪಿಎಸ್ಐ ನೇಮಕಾತಿ ಹಗರಣದ ಗಂಭೀರ ಸ್ವರೂಪ ಮತ್ತು ಸಾರ್ವಜನಿಕ ಮಹತ್ವದ ಹಿನ್ನೆಲೆಯ ಕಾರಣಕ್ಕಾಗಿ ಮುಂದಿನ ತನಿಖೆಯನ್ನು ಕರ್ನಾಟಕ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಅವರ ನೇತೃತ್ವದ ಆಯೋಗದ ಮೂಲಕ ನ್ಯಾಯಾಂಗ ತನಿಖೆ ನಡೆಸಲು ತೀರ್ಮಾನಿಸಿದ್ದೇವೆ. ಈ ಮೂಲಕ ನಾವು ನುಡಿದಂತೆ ನಡೆದಿದ್ದೇವೆ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News