ಸಚಿವ ಝಮೀರ್‌ ಅಹ್ಮದ್ ವಿರುದ್ದ ಅವಹೇಳನಾಕಾರಿ ಪದ ಬಳಕೆ | ಪುನೀತ್‌ ಕೆರೆಹಳ್ಳಿ ಬಂಧನ

Update: 2024-11-13 18:54 GMT

ಪುನೀತ್‌ ಕೆರೆಹಳ್ಳಿ ಬಂಧನ

ಬೆಂಗಳೂರು : ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡಿ ಧರ್ಮ ಮತ್ತು ಜಾತಿ ನಿಂದನೆ ಮಾಡಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್‌ ಕೆರೆಹಳ್ಳಿಯನ್ನು ಚಾಮರಾಜಪೇಟೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ʼನ.11ರಂದು ಪುನೀತ್ ಕೆರೆಹಳ್ಳಿ ಯಾವುದೋ ಸ್ಥಳದಲ್ಲಿ ತಮ್ಮ ಸಾಮಾಜಿಕ ಜಾಲತಾಣವಾದ ಫೇಸ್‍ಬುಕ್‍ನಲ್ಲಿ ಸಚಿವ ಝಮೀರ್ ಅಹ್ಮದ್ ಖಾನ್ ಅವರ ಕುರಿತು ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ನಿಂದನೆ ಮಾಡಿದ್ದಾರೆ. ಪುನೀತ್ ಕೆರೆಹಳ್ಳಿ ಧರ್ಮ-ಧರ್ಮಗಳ ನಡುವೆ ದ್ವೇಷ ಬಿತ್ತುವ ಹಾಗೂ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಪದೇ ಪದೇ ಅವಾಚ್ಯ ಶಬ್ದಗಳಿಂದ ಸಚಿವರನ್ನು ನಿಂದಿಸಿದ್ದ, ಜತೆಗೆ ಪ್ರಾಣ ಬೆದರಿಕೆ ಸಹ ಹಾಕಿದ್ದಾರೆ. ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕುʼ ಎಂದು ಝಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕ ಬಿ.ಎಸ್.ಅಶೋಕ್ ದೂರು ನೀಡಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News