ಕಾಂಗ್ರೆಸ್‌ ಸರಕಾರ ಹಾಲಿನ ದರ ಹೆಚ್ಚಳ ಮಾಡಿ ವಿಕೃತ ಸಂತೋಷ ಅನುಭವಿಸುತ್ತಿದೆ : ಆ‌ರ್‌.ಅಶೋಕ್

Update: 2024-06-25 10:20 GMT

ಬೆಂಗಳೂರು : ತುರ್ತು ಪರಿಸ್ಥಿತಿ ಹೇರಿಕೆಯ ವಾರ್ಷಿಕೋತ್ಸವ ಸಂಭ್ರಮಿಸಲು ಕಾಂಗ್ರೆಸ್‌ ಸರಕಾರವು ನಂದಿನಿ ಹಾಲಿನ ದರವನ್ನು ಲೀಟರ್ ಗೆ ಎರಡು ರೂ. ಹೆಚ್ಚಳ ಮಾಡಿ ವಿಕೃತ ಸಂತೋಷ ಅನುಭವಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು, "ಸಿಎಂ ಸಿದ್ದರಾಮಯ್ಯನವರೇ, ತಾವು ಅಧಿಕಾರಕ್ಕೆ ಬಂದ ಮೇಲೆ ಕೇವಲ 13 ತಿಂಗಳಿನಲ್ಲಿ ಹಾಲಿನ ದರವನ್ನು ಎರಡು ಬಾರಿ ಹೆಚ್ಚಿಸಿದ್ದೀರಿ. ಕಳೆದ ವರ್ಷ ಆಗಸ್ಟ್ ನಲ್ಲಿ 3 ರೂಪಾಯಿ ಹೆಚ್ಚಳವಾಗಿದ್ದ ಹಾಲಿನ ಬೆಲೆ ಈಗ ಮತ್ತೊಮ್ಮೆ 2 ರೂಪಾಯಿ ಹೆಚ್ಚಾಗಿದೆ. ರಾಜ್ಯದ ಬಡವರು, ಮಾಧ್ಯಮ ವರ್ಗದ ಜನ ಈಗಾಗಲೇ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ, ಗಗನಕ್ಕೇರಿರುವ ತರಕಾರಿ ಬೆಲೆಗಳಿಂದ ಕಂಗಾಲಾಗಿದ್ದಾರೆ" ಎಂದು ಆಕ್ರೋಶ ವ್ಯಕ್ತಪಡಿಸಿದರು

"ಇಂತಹ ಪರಿಸ್ಥಿತಿಯಲ್ಲಿ ಹಾಲಿನ ದರ ಏರಿಸಿ ಮತ್ತೊಮ್ಮೆ ಬಡವರ ಗಾಯದ ಮೇಲೆ ಬರೆ ಎಳೆದಿದ್ದೀರಿ. ನಿಮಗೆ ಬಡವರು, ಮಾಧ್ಯಮ ವರ್ಗದ ಜನರ ಮೇಲೆ ಕಿಂಚಿತ್ತಾದರೂ ಕನಿಕರ ಇದ್ದರೆ, ಈ ಕೂಡಲೇ ಹಾಲಿನ ದರ ಏರಿಕೆ ಆದೇಶವನ್ನು ಹಿಂಪಡೆಯಿರಿ" ಎಂದು ಆರ್‌.ಅಶೋಕ್‌ ಆಗ್ರಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News