ನೂತನ ಕ್ರಿಮಿನಲ್ ಕಾನೂನುಗಳಿಗೆ ತಿದ್ದುಪಡಿ, ಸಾರ್ವಜನಿಕರ ದಿಕ್ಕು ತಪ್ಪಿಸುವ ಪ್ರಯತ್ನ : ಆರ್‌.ಅಶೋಕ್

Update: 2024-07-03 07:14 GMT

ಬೆಂಗಳೂರು: "ನೂತನ ಕ್ರಿಮಿನಲ್ ಕಾನೂನುಗಳಿಗೆ ತಿದ್ದುಪಡಿ ತರುವ ಮೂಲಕ ಕಾಂಗ್ರೆಸ್ ಸರಕಾರ ಸಾರ್ವಜನಿಕರ ದಿಕ್ಕು ತಪ್ಪಿಸಲು ಹೊರಟಿದೆ" ಎಂದು ವಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, "ಅಸಮರ್ಥ ಸಿಎಂ ಸಿದ್ದರಾಮಯ್ಯ ಅವರೇ, ಮುಂಬರುವ ಅಧಿವೇಶನದಲ್ಲಿ ನಿಮ್ಮ ಸರಕಾರದ ಎಲ್ಲ ವೈಫಲ್ಯಗಳನ್ನು, ಭ್ರಷ್ಟಾಚಾರಗಳನ್ನ, ಎಡವಟ್ಟುಗಳನ್ನು, ಜನವಿರೋಧಿ ನೀತಿಗಳನ್ನು ಸದನದಲ್ಲಿ ಪ್ರಸ್ತಾಪ ಮಾಡಲಿದ್ದೇವೆ. ನಿಮ್ಮ ಸರಕಾರದ ದುರಾಡಳಿತದಿಂದ ಬೇಸತ್ತಿರುವ ಜನ ಸಾಮಾನ್ಯರ ಪರವಾಗಿ ಸದನದಲ್ಲಿ ದನಿ ಎತ್ತುತ್ತೇವೆ. ಸದನದ ದಿಕ್ಕು ತಪ್ಪಿಸುವ ನಿಮ್ಮ ಯಾವ ಕುತಂತ್ರಗಳು ನಡೆಯುವುದಿಲ್ಲ. ಸದನದಲ್ಲಿ ಉತ್ತರಿಸಲು ತಾಯರಾಗಿ" ಎಂದು ಎಚ್ಚರಿಸಿದ್ದಾರೆ.

"ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಪೆಟ್ರೋಲ್, ಡೀಸೆಲ್, ಹಾಲಿನ ಬೆಲೆ ಏರಿಕೆ, ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟ ಇವುಗಳಿಂದ ವಿಧಾನಸಭಾ ಅಧಿವೇಶನದಲ್ಲಿ ಇಕ್ಕಟ್ಟಿಗೆ ಸಿಲುಕಬೇಕಾಗುತ್ತದೆ ಎನ್ನುವ ಭಯದಿಂದ ಹೊಸ ನಾಟಕ ಶುರು ಮಾಡಿರುವ ಈ ನಿರ್ಲಜ್ಜ ಕಾಂಗ್ರೆಸ್‌ ಸರ್ಕಾರ, ನೂತನ ಕ್ರಿಮಿನಲ್ ಕಾನೂನುಗಳಿಗೆ ತಿದ್ದುಪಡಿ ತರುವ ಮೂಲಕ ಸಾರ್ವಜನಿಕರ ದಿಕ್ಕು ತಪ್ಪಿಸಲು ಹೊರಟಿದೆ" ಎಂದು ಆಕ್ರೋಶ ಹೊರಹಾಕಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News