ಮುಡಾ ನಿವೇಶನ ಹಿಂದಿರುಗಿಸುವವುದಾಗಿ ಸಿಎಂ ಪತ್ನಿ ಪತ್ರ | ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ? : ಆರ್‌.ಅಶೋಕ್‌

Update: 2024-09-30 17:57 GMT

ಸಿದ್ದರಾಮಯ್ಯ/ಆರ್‌.ಅಶೋಕ್

ಬೆಂಗಳೂರು : "ಮುಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಹೆಸರಿನಲ್ಲಿ ಪಡೆದಿದ್ದ 14 ಸೈಟುಗಳನ್ನು ಹಿಂತಿರುಗಿಸುವ ನಿರ್ಧಾರ ಮಾಡಿದ್ದು, ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನ ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟದ ಹಾದಿಯಲ್ಲಿ ಸಿಕ್ಕಿರುವ ಮತ್ತೊಂದು ಜಯ" ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರು ಮುಡಾದಿಂದ ಪಡೆದಿದರುವ 14 ನಿವೇಶನಗಳನ್ನು ಹಿಂದಿರುಗಿಸುತ್ತಿರುವುದಾಗಿ ಮುಡಾ ಆಯಕ್ತರಿಗೆ ಪತ್ರ ಬರೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅಶೋಕ್‌ ಅವರು, "ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ? ಕದ್ದ ಮಾಲನ್ನು ವಾಪಸ್ಸು ಕೊಟ್ಟ ತಕ್ಷಣ ಕಳ್ಳತನ ಮಾಫಿ ಆಗಿಬಿಡುತ್ತದೆಯೇ?" ಎಂದು ಪ್ರಶ್ನಿಸಿದ್ದಾರೆ.

"ಕೆಟ್ಟ ಮೇಲೆ ಬುದ್ಧಿ ಬಂತು ಎಂಬಂತೆ ಈಗಲಾದರೂ ಸಿದ್ದರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ ಎನ್ನುವುದು ಸಮಾಧಾನಕರ ವಿಷಯ. ಆದರೆ 'ಅಡಿಕೆಗೆ ಹೋದ ಮಾನ, ಆನೆ ಕೊಟ್ಟರೂ ಬರುವುದಿಲ್ಲ' ಸಿಎಂ ಸಿದ್ದರಾಮಯ್ಯನವರೇ. ತಾವು ತನಿಖೆ ಎದುರಿಸಲೇಬೇಕು. ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲೇ ಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿರಂತರವಾಗಿ ಮುಂದುವರೆಯುತ್ತದೆ" ಎಂದು ತಿಳಿಸಿದ್ದಾರೆ.‌

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News