ಬಿಜೆಪಿ ಶಾಸಕರ ಅಮಾನತು ಆದೇಶ ಹಿಂಪಡೆಯುವಂತೆ ಸ್ಪೀಕರ್‌ಗೆ ಆರ್.ಅಶೋಕ್ ಮನವಿ

Update: 2025-04-21 18:36 IST
ಬಿಜೆಪಿ ಶಾಸಕರ ಅಮಾನತು ಆದೇಶ ಹಿಂಪಡೆಯುವಂತೆ ಸ್ಪೀಕರ್‌ಗೆ ಆರ್.ಅಶೋಕ್ ಮನವಿ
  • whatsapp icon

ಬೆಂಗಳೂರು : ಬಿಜೆಪಿಯ 18 ಮಂದಿ ಶಾಸಕರನ್ನು ಅಮಾನತು ಮಾಡಿರುವ ಆದೇಶವನ್ನು ಹಿಂಪಡೆಯುವಂತೆ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರಲ್ಲಿ ಮನವಿ ಮಾಡಿದ್ದೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕರ ಅಮಾನತು ಆದೇಶ ಕುರಿತು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದೇವೆ. ಈ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದ್ದಾರೆ ಎಂದರು.

ಶಾಸಕರು ಕಮಿಟಿ ಸಭೆಗೆ ಹೋಗಲು ಸಾಧ್ಯವಾಗುತ್ತಿಲ್ಲ. ಶಾಸಕರ ಅಮಾನತು ಮಾಡಿರುವ ಕ್ರಮ ಸರಿಯಲ್ಲ. ಹಿಂದೆ ಈ ರೀತಿಯ ಅನೇಕ ಘಟನೆಗಳು ಸದನದಲ್ಲಿ ನಡೆದಿವೆ ಎಂದು ಸ್ಪೀಕರ್ ಅವರಿಗೆ ಮನವರಿಕೆ ಮಾಡಲಾಗಿದೆ ಎಂದು ಆರ್.ಅಶೋಕ್ ಹೇಳಿದರು.

ಪ್ರತಿಪಕ್ಷವಾಗಿ ಬಿಜೆಪಿ, ಸಚಿವ ಕೆ.ಎನ್.ರಾಜಣ್ಣ ಅವರ ಹನಿಟ್ರ್ಯಾಪ್ ಬಗ್ಗೆ ಮಾತನಾಡಬೇಕಿತ್ತು, ಮಾತನಾಡಿದ್ದೇವೆ. ಅದು ಬಿಟ್ಟರೆ ಸ್ಪೀಕರ್ ಕುರ್ಚಿ ಮೇಲೆ ನಮಗೆ ಅಗೌರವ ಇಲ್ಲ. ಹಾಗಾಗಿ, ಶಾಸಕರ ಅಮಾನತನ್ನು ಹಿಂಪಡೆಯಬೇಕೆಂದು ಮನವಿ ಮಾಡಿದ್ದೇವೆ. ಈ ಬಗ್ಗೆ ಪರಿಶೀಲಿಸಿ, ಕಾನೂನು ಸಚಿವರು ಹಾಗೂ ಸರಕಾರದ ಜೊತೆ ಚರ್ಚೆ ಮಾಡಿ ತಿಳಿಸುವುದಾಗಿ ಸ್ಪೀಕರ್ ಹೇಳಿದ್ದಾರೆ ಎಂದು ಆರ್.ಅಶೋಕ್ ತಿಳಿಸಿದರು. ಶಾಸಕರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಸಿ.ಕೆ.ರಾಮಮೂರ್ತಿ, ಮುನಿರಾಜು ಸೇರಿ ಮತ್ತಿತರರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News