ನಾಳೆ(ಜೂ.7) ಬೆಂಗಳೂರಿನ ಸಿವಿಲ್ ಕೋರ್ಟ್‍ಗೆ ಹಾಜರಾಗಲಿರುವ ರಾಹುಲ್ ಗಾಂಧಿ

Update: 2024-06-06 14:55 GMT

 ರಾಹುಲ್ ಗಾಂಧಿ | PTI

ಬೆಂಗಳೂರು : ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕೆಪಿಸಿಸಿ ವತಿಯಿಂದ ಬಿಜೆಪಿ ವಿರುದ್ಧ ನೀಡಿದ್ದ ಜಾಹೀರಾತಿಗೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಮುಖಂಡ ರಾಹುಲ್ ಗಾಂಧಿ ನಾಳೆ (ಶುಕ್ರವಾರ) ಬೆಳಗ್ಗೆ 10.30ಕ್ಕೆ ನಗರದ ಕಾವೇರಿ ಭವನದ ಹಿಂಭಾಗದಲ್ಲಿರುವ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.

ಅನಂತರ, 11.30ಕ್ಕೆ ಕ್ವೀನ್ಸ್‍ರಸ್ತೆಯಲ್ಲಿರುವ ಭಾರತ್ ಜೋಡೋ ಭವನದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ವಿಜೇತ ಹಾಗೂ ಪರಾಜಿತ ಅಭ್ಯರ್ಥಿಗಳ ಜತೆ ಸಭೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

‘ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ನಾಳೆ ಬೆಂಗಳೂರಿನ ಕಾವೇರಿ ಭವನದ ಬಳಿಯ ಸಿಟಿ ಸಿವಿಲ್ ಕೋರ್ಟ್ ವ್ಯಾಪ್ತಿಯಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಆಗಮಿಸುತ್ತಿದ್ದು, ಪಕ್ಷದ ಕಾರ್ಯಕರ್ತರು, ಮುಖಂಡರು, ಬೆಂಬಲಿಗರು, ಅಭಿಮಾನಿಗಳು ಯಾರೂ ಈ ವೇಳೆಯಲ್ಲಿ ಯಾವುದೇ ಘೋಷಣೆಗಳನ್ನು ಕೂಗಬಾರದು ಹಾಗೂ ಪ್ಲೆಕಾರ್ಡ್ ಪ್ರದರ್ಶನ ಮಾಡಬಾರದು’

ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News