ರಾಜ್ಯದಲ್ಲಿ ಒಂದು ವಾರದ ಕಾಲ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ

Update: 2024-05-12 13:24 GMT

ಬೆಂಗಳೂರು : ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚುರುಕಾಗಿದ್ದು, ಸತತವಾಗಿ ಒಂದು ವಾರದ ಕಾಲ ಗುಡುಗು ಸಹಿತ ಬಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಅಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಹಾವೇರಿ, ಧಾರವಾಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಮಂಡ್ಯ, ದಾವಣಗೆರೆ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಭಾರೀ ಮಳೆಯಾಗಲಿದೆ.

ಬಾಗಲಕೋಟೆ, ಗದಗ, ಕೊಪ್ಪಳ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯ ಸಂಭವವಿದೆ. ಇನ್ನು ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು, ವಿಜಯನಗರ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಲಘು ಅಥವಾ ಸಾಧಾರಣ ಮಳೆಯಾಗಲಿದೆ.

ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 32 ಡಿಗ್ರಿ ಮತ್ತು 24 ಡಿಗ್ರಿ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News