ನ.9ರಿಂದ ದ.ಕ. ಉಡುಪಿ ಸೇರಿ ರಾಜ್ಯದ ಹಲವೆಡೆ ಮತ್ತಷ್ಟು ಮಳೆ ಸಾಧ್ಯತೆ: ಹವಾಮಾನ ಇಲಾಖೆ
Update: 2024-11-04 15:40 GMT
ಬೆಂಗಳೂರು: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ ನ.9ರಿಂದ ಮಳೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸೋಮವಾರದಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 2 ದಿನಗಳ ಕಾಲ ರಾಜ್ಯದ 15 ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಶೋರಾಪುರ, ಹುಣಸೂರು, ಕೋಲಾರ, ಪೊನ್ನಂಪೇಟೆ, ಕೆಆರ್ ನಗರ, ಮಹಾಲಿಂಗಪುರ, ಸೈದಾಪುರ, ಬಸವನ ಬಾಗೇವಾಡಿ, ನಾಗಮಂಗಲದಲ್ಲಿ ಮಳೆಯಾಗಲಿದೆ.