ʼರಾಜಭವನ ಚಲೋʼ | ರಾಜ್ಯಪಾಲರನ್ನು ಭೇಟಿಯಾದ ಕಾಂಗ್ರೆಸ್‌ ನಾಯಕರು

Update: 2024-08-31 15:48 GMT

ಬೆಂಗಳೂರು : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ಹಾಗೂ ಶಶಿಕಲಾ ಜೊಲ್ಲೆ ಸೇರಿ ಹಲವರ ವಿಚಾರಣೆಗೆ ಅನುಮತಿ ಕೋರಿ ರಾಜ್ಯಪಾಲರ ಮುಂದೆ ಇರುವ ಎಲ್ಲ ಪ್ರಕರಣಗಳ ಅಭಿಯೋಜನೆಗೆ ಅನುಮತಿ ನೀಡುವಂತೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ನಾಯಕರು ಶನಿವಾರ ಪ್ರತಿಭಟನೆ ನಡೆಸಿ ʼರಾಜಭವನ ಚಲೋʼ ನಡೆಸಿದ್ದಾರೆ.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು, ಶಾಸಕರು, ಸಂಸದರು ಭಾಗವಹಿಸಿದರು. ಬಳಿಕ ಬೃಹತ್ ಕಾಲ್ನಾಡಿ ಜಾಥಾ ಮೂಲಕ ಕಾಂಗ್ರೆಸ್‌ ನಾಯಕರು ರಾಜಭವನ ತಲುಪಿ ರಾಜ್ಯಪಾಲರನ್ನು ಭೇಟಿಯಾಗಿ ವಿಪಕ್ಷ ನಾಯಕರ ವಿರುದ್ಧವೂ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ಮನವಿ ಸಲ್ಲಿಕೆ ಮಾಡಿದ್ದಾರೆ. 

ಸಿಎಂ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ನೀಡಿಲ್ಲವೇ?: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನೇರವಾಗಿ ಕಾನೂನು ಕ್ರಮ ಕೈಗೊಳ್ಳಲು ನಾನು ಅನುಮತಿ ನೀಡಿಲ್ಲ. ಈ ಪ್ರಕರಣದ ಕುರಿತು ಕೇಳಿ ಬಂದಿರುವ ಆರೋಪಗಳ ಬಗ್ಗೆ ತನಿಖೆ ನಡೆಸಲು ಮಾತ್ರ ಸೂಚನೆ ನೀಡಿದ್ದೇನೆ ಎಂದು ಕಾಂಗ್ರೆಸ್ ನಾಯಕರಿಗೆ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಸ್ಪಷ್ಟನೆ ನೀಡಿದ್ದಾರೆ ಎಂದು ಹೇಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News