ರಾಜ್ಯಸಭಾ ಚುನಾವಣೆ : 11 ಗಂಟೆ ವೇಳೆಗೆ ಶೇ.50ರಷ್ಟು ಮತದಾನ

Update: 2024-02-27 06:06 GMT

ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ಮತದಾನ ಆರಂಭವಾಗಿದ್ದು, ಆಡಳಿತಾರೂಢ ಕಾಂಗ್ರೆಸ್ ಸೇರಿದಂತೆ ಈವರೆಗೆ ಒಟ್ಟು 112 ಮಂದಿ ಶಾಸಕರು ಮತ ಚಲಾಯಿಸಿದ್ದು, ಶೇಕಡಾ 50ರಷ್ಟು ಮತದಾನ ದಾಖಲಾಗಿದೆ.

223 ಶಾಸಕರು ನಾಲ್ವರು ಸದಸ್ಯರನ್ನು ಆಯ್ಕೆ ಮಾಡಬೇಕಿದ್ದು, ಶಾಸಕರು ತಂಡಗಳಾಗಿ ಬಂದು ಮತ ಚಲಾಯಿಸುತ್ತಿದ್ದಾರೆ. ಚುನಾವಣಾಧಿಕಾರಿಯಾಗಿ ವಿಧಾನಸಭೆ ಕಾರ್ಯದರ್ಶಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗಳಾಗಿ ಅಜಯ್ ಮಾಕನ್, ಸೈಯದ್ ನಾಸಿರ್ ಹುಸೇನ್ ಮತ್ತು ಜಿ.ಸಿ. ಚಂದ್ರಶೇಖರ್ ಕಣದಲ್ಲಿದ್ದಾರೆ. ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳಾಗಿ ಬಿಜೆಪಿಯ ನಾರಾಯಣ ಸಾ ಭಾಂಡಗೆ ಮತ್ತು ಜೆಡಿಎಸ್ ನ ಡಿ. ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ.

ವಿಧಾನಸೌಧದ ಮೊದಲ ಮಹಡಿಯಲ್ಲಿನ ಕೊಠಡಿ ಸಂಖ್ಯೆ 106 ರಲ್ಲಿ ಮತದಾನದ ನಡೆಯುತ್ತಿದ್ದು, ಮತ‌ದಾನ ಕೇಂದ್ರದಲ್ಲಿ ಸಿಸಿ ಟಿವಿ, ಬ್ಯಾರಿಕೇಡ್ ಅಳವಡಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News