ರಾಜ್ಯಸಭಾ ಚುನಾವಣೆ: ನಾಮಪತ್ರ ಸಲ್ಲಿಸಲು ನಾಳೆ(ಫೆ.15) ಕೊನೆಯ ದಿನ
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭಾ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷ ಕರ್ನಾಟಕ ರಾಜ್ಯದಿಂದ ಅಜಯ್ ಮಾಕನ್, ಡಾ. ಸೈಯದ್ ಹುಸೇನ್ ಮತ್ತು ಜೆ.ಸಿ. ಚಂದ್ರಶೇಖರ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ.
ಬುಧವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣು ಗೋಪಾಲ್ ಅವರು, ರಾಜ್ಯಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಸೈಯದ್ ನಾಸಿರ್ ಹುಸೇನ್ ಮತ್ತು ಜಿ.ಸಿ. ಚಂದ್ರಶೇಖರ್ ಅವರಿಗೆ ಮತ್ತೊಂದು ಅವಧಿಗೆ ಅವಕಾಶ ಕಲ್ಪಿಸಲಾಗಿದೆ.
ರಾಜ್ಯದಿಂದ ರಾಜ್ಯಸಭೆಯ ಆಯ್ಕೆಯಾಗಿದ್ದ ಬಿಜೆಪಿಯ ರಾಜೀವ್ ಚಂದ್ರಶೇಖರ್, ಕಾಂಗ್ರೆಸ್ ಪಕ್ಷದ ಜಿ.ಸಿ ಚಂದ್ರಶೇಖರ್, ಡಾ.ಎಲ್. ಹನುಮಂತಯ್ಯ ಹಾಗೂ ಸೈಯದ್ ನಾಸಿರ್ ಹುಸೇನ್ ಅವರ ಅಧಿಕಾರ ಅವಧಿ 2024ರ ಎಪ್ರಿಲ್ 2ಕ್ಕೆ ಕೊನೆಗೊಳ್ಳಲಿದ್ದು, ಇವರಿಂದ ತೆರವಾಗಲಿರುವ 4 ಸ್ಥಾನಗಳಿಗೆ ಫೆ.27ಕ್ಕೆ ಮತದಾನ ನಡೆಯಲಿದೆ.
ಈಗಾಗಲೇ ಚುನಾವಣಾ ಅಧಿಸೂಚನೆ ಹೊರಬಿದ್ದಿದ್ದು, ನಾಮಪತ್ರ ಸಲ್ಲಿಸಲು ನಾಳೆ (ಫೆ.15) ಕೊನೆಯ ದಿನ. ಹೀಗಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ನಾಳೆಯೇ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ನಾಮಪತ್ರಗಳ ಪರಿಶೀಲನೆ ಫೆ.16ಕ್ಕೆ ನಡೆಯಲಿದ್ದು, ಫೆ.20 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದೆ. ಫೆ. 27ರ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯ ವರೆಗೆ ಶಾಸಕರು ಮತದಾನ ಮಾಡಲಿದ್ದು, ಅಂದು ಸಂಜೆ 5 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ. ಅಂದೇ ಫಲಿತಾಂಶ ಪ್ರಕಟಿಸುವ ಸಾಧ್ಯತೆಗಳಿವೆ.