ʼರಾಮೇಶ್ವರಂ ಕೆಫೆʼ ಸ್ಫೋಟ ಪ್ರಕರಣದ ತನಿಖೆ ಸಿಸಿಬಿಗೆ ವರ್ಗಾವಣೆ: ಪೊಲೀಸ್ ಆಯುಕ್ತ ಬಿ. ದಯಾನಂದ್

Update: 2024-03-02 15:21 GMT

ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಕೇಂದ್ರ ಅಪರಾಧ ದಳಕ್ಕೆ (ಸಿಸಿಬಿ) ವರ್ಗಾವಣೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಶನಿವಾರ ಆದೇಶ ಹೊರಡಿಸಿದ್ದಾರೆ.

ಎಚ್‍ಎಎಲ್ ಪೊಲೀಸ್ ಠಾಣೆಯಲ್ಲಿ ಬಾಂಬ್ ಸ್ಫೋಟದ ಬಗ್ಗೆ ಪ್ರಕರಣ ದಾಖಲಾಗಿದ್ದು, ಇದರ ತನಿಖೆಯನ್ನು ರಾಜ್ಯ ಸರಕಾರವು ಸಿಸಿಬಿಗೆ ಒಪ್ಪಿಸಿದ ಹಿನ್ನೆಲೆ, ತನಿಖಾಧಿಕಾರಿಯಾಗಿ ಎಸಿಪಿ ನವೀನ್ ಕುಲಕರ್ಣಿ ನೇಮಕಗೊಂಡಿರುವುದಾಗಿ ಎಂದು ಬಿ.ದಯಾನಂದ್ ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ದೊರೆತ ಕುರುಹುಗಳ ಆಧಾರದ ಮೇಲೆ ಅನೇಕ ಪೊಲೀಸ್ ತಂಡಗಳು ಬೇರೆ ಬೇರೆ ಆಯಾಮಗಳಿಂದ ತನಿಖೆ ಕೈಗೊಳ್ಳುತ್ತಿವೆ. ಇದೊಂದು ಭದ್ರತಾ ವಿಷಯಕ್ಕೆ ಸಂಬಂಧಿಸಿದ ಸೂಕ್ಷ್ಮ ಪ್ರಕರಣವಾಗಿರುವುದರಿಂದ ಎಲ್ಲರೂ ಸಹಕರಿಸಬೇಕು ಎಂದು ಬಿ.ದಯಾನಂದ್ ಹೇಳಿದ್ದಾರೆ.

ಘಟನೆಯಲ್ಲಿನ ಗಾಯಾಳುಗಳು ಗುಣಮುಖರಾಗುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಿರುವುದಿಲ್ಲ ಎಂದು ಬಿ.ದಯಾನಂದ್ ಸ್ಪಷ್ಟಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News