ರನ್ಯಾ ರಾವ್ ಚಿನ್ನ ಕಳ್ಳ ಸಾಗಾಣಿಕೆ ಆರೋಪ ಪ್ರಕರಣ : ಡಿಜಿಪಿ ಡಾ.ಕೆ.ರಾಮಚಂದ್ರ ರಾವ್‍ಗೆ ಕಡ್ಡಾಯ ರಜೆ

Update: 2025-03-15 21:19 IST
ರನ್ಯಾ ರಾವ್ ಚಿನ್ನ ಕಳ್ಳ ಸಾಗಾಣಿಕೆ ಆರೋಪ ಪ್ರಕರಣ : ಡಿಜಿಪಿ ಡಾ.ಕೆ.ರಾಮಚಂದ್ರ ರಾವ್‍ಗೆ ಕಡ್ಡಾಯ ರಜೆ

ರನ್ಯಾ ರಾವ್‌/ಕೆ.ರಾಮಚಂದ್ರ ರಾವ್

  • whatsapp icon

ಬೆಂಗಳೂರು: ರಾಜ್ಯ ಪೊಲೀಸ್ ಗೃಹ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಡಿಜಿಪಿ ಡಾ.ಕೆ.ರಾಮಚಂದ್ರ ರಾವ್ ಅವರಿಗೆ ಕಡ್ಡಾಯ ರಜೆ ನೀಡಿರುವ ಬೆನ್ನಲ್ಲೇ ಹಿರಿಯ ಐಪಿಎಸ್ ಅಧಿಕಾರಿ ಕೆ.ವಿ. ಶರತ್‍ಚಂದ್ರ ಅವರಿಗೆ ರಾಜ್ಯ ಸರಕಾರವು ಹೆಚ್ಚುವರಿ ಜವಾಬ್ದಾರಿ ವಹಿಸಿ ಶನಿವಾರ ಆದೇಶ ಹೊರಡಿಸಿದೆ.

ಡಿಜಿಪಿ ಡಾ.ಕೆ.ರಾಮಚಂದ್ರ ರಾವ್ ಅವರ ಮಲ ಮಗಳು ರನ್ಯಾ ರಾವ್ ಚಿನ್ನ ಕಳ್ಳಸಾಗಾಣಿಕೆ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದು, ಈ ಪ್ರಕರಣದ ತನಿಖೆ ನಡೆಯುತ್ತಿರುವುದರಿಂದ ವಿಚಾರಣೆಯ ದೃಷ್ಟಿಯಿಂದ ಸದ್ಯ ಡಾ.ಕೆ.ರಾಮಚಂದ್ರ ರಾವ್ ಅವರಿಗೆ ಕಡ್ಡಾಯ ರಜೆ ನೀಡಿ ಸರಕಾರ ಆದೇಶದಲ್ಲಿ ತಿಳಿಸಿದೆ.


Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News