ಅತ್ಯಾಚಾರ ಪ್ರಕರಣ | ಮುನಿರತ್ನಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ

Update: 2024-10-05 07:52 GMT

ಮುನಿರತ್ನ

ಬೆಂಗಳೂರು : ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಲಯ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಇಂದು(ಅ.5) ಎಸ್​ಐಟಿ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಮುನಿರತ್ನ ಅವರನ್ನು ಅ.19ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಎಸ್​ಐಟಿ ಅಧಿಕಾರಿಗಳು ಮುನಿರತ್ನ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಿ, ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರುಪಡಿಸಿದ್ದು, ಮತ್ತೆ ಮುನಿರತ್ನ ಅವರನ್ನು ಕಸ್ಟಡಿಗೆ ನೀಡುವಂತೆ ಎಸ್​ಐಟಿ ಅಧಿಕಾರಿಗಳು ಕೋರ್ಟ್​ಗೆ ಮನವಿ ಮಾಡಿದರು. ಆದರೆ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News