ಅತ್ಯಾಚಾರ, ಲೈಂಗಿಕ ಕಿರುಕುಳ ಪ್ರಕರಣ: ಪ್ರಜ್ವಲ್ ರೇವಣ್ಣ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಹೇಳಿದ್ದೇನು?

Update: 2024-10-22 05:27 GMT

ಬೆಂಗಳೂರು:ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಒಂದು ಜಾಮೀನು ಮತ್ತು ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ವಜಾಗೊಳಿಸಿ ಹೈಕೋರ್ಟ್ ಆದೇಶಿಸಿದೆ.

ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಮಹಿಳೆಯರ ಘನತೆಗೆ ಧಕ್ಕೆ ಉಂಟು ಮಾಡಿದ ಹಾಗೂ ಜೀವ ಬೆದರಿಕೆ ಹಾಕಿದ ಆರೋಪ ಪ್ರಕರಣಗಲ್ಲಿ ಒಂದು ಜಾಮೀನು ಮತ್ತು ಎರಡು ನಿರೀಕ್ಷಣಾಜಾಮೀನು ಅರ್ಜಿಗಳನ್ನು ಪ್ರಜ್ವಲ್ ರೇವಣ್ಣ ಹೈಕೋರ್ಟ್‌ಗೆ ಸಲ್ಲಿಸಿದ್ದರು.ಈ ಅರ್ಜಿಗಳನ್ನ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪು ಪ್ರಕಟಿಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಜಾಮೀನು,ನಿರೀಕ್ಷಣಾ ಜಾಮೀನು ನೀಡಲು ತಿರಸ್ಕರಿಸಿದ್ದಾರೆ.

ಈ ವೇಳೆ ಅರ್ಜಿದಾರ ಪ್ರಜ್ವಲ್, ಮೇಲ್ನೋಟಕ್ಕೆ ಕೃತ್ಯಗಳು ಲಂಪಟ ಹಾಗೂ ಇಂದ್ರಿಯಗಳ ಮೇಲೆ ನಿಯಂತ್ರಣ ಕಳೆದು ಕೊಂಡಿರುವುದು ಮತ್ತು ಸ್ವಾಸ್ಥ್ಯ ಸಮಾಜದ ಬೆನ್ನುಹುರಿಗೆ ಚಳಿ ಹುಟ್ಟಿಸುವುದನ್ನು ಚಿತ್ರಿಸುತ್ತಿದೆ. ಹೀಗಾಗಿ ಜಾಮೀನು ಪಡೆಯಲು ಪ್ರಜ್ವಲ್ ರೇವಣ್ಣ ಅರ್ಹ ರಾಗಿಲ್ಲ ಎಂದು ಕಟುವಾಗಿ ನುಡಿದಿದ್ದಾರೆ.

ಹೈಕೋರ್ಟ್‌ನ ಈ ಆದೇಶದಿಂದ ಪ್ರಜ್ವಲ್ ಅವರು ಈಗ ಜಾಮೀನುಗಾಗಿ ಸುಪ್ರಿಂ ಕೋರ್ಟ್ ಮೊರೆ ಹೋಗಬೇಕಿದೆ. ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮನೆಕೆಲಸದಾಕೆ ನೀಡಿರುವ ದೂರಿನ ಅನ್ವಯ ದಾಖಲಾಗಿರುವ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ಜಾಮೀನು ಕೋರಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News