ಶೇ.60ರಷ್ಟು ಕಮಿಷನ್ ವಸೂಲಿ ನೆನಪಿನ ಜಾತ್ರೆಯೇ ಹೊರತು, ಕಾಂಗ್ರೆಸ್ ಸಮಾವೇಶವಲ್ಲ : ಆರ್.ಅಶೋಕ್

Update: 2025-01-21 19:00 IST
Photo of R.Ashok

ಆರ್.ಅಶೋಕ್

  • whatsapp icon

ಬೆಂಗಳೂರು : ಬೆಳಗಾವಿಯಲ್ಲಿ ನಡೆದಿರುವುದು ಶೇ.60ರಷ್ಟು ಕಮಿಷನ್ ವಸೂಲಿ ಮಾಡಿದ ನೆನಪಿನ ಜಾತ್ರೆಯೇ ಹೊರತು, ಕಾಂಗ್ರೆಸ್ ಸಮಾವೇಶವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿ ಹೆಸರಲ್ಲಿ ಕಾಂಗ್ರೆಸ್ ಸಮಾವೇಶ ಮಾಡಲಾಗಿದೆ. ಗಾಂಧೀಜಿ ಬಗ್ಗೆ ಅಷ್ಟೊಂದು ಪ್ರೀತಿ ಇದ್ದರೆ, ಕಾಂಗ್ರೆಸ್ ಭವನಕ್ಕೆ ಗಾಂಧೀಜಿ ಅಥವಾ ಸರ್ದಾರ್ ವಲ್ಲಭಭಾಯಿ ಪಟೇಲ್ ಹೆಸರಿಡಬೇಕಿತ್ತು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ. ಇವರಿಗೆ ಗಾಂಧೀಜಿಯ ಹೆಸರು ಹೇಳುವ ನೈತಿಕತೆ ಇಲ್ಲ ಎಂದು ಟೀಕಿಸಿದರು.

ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಹಸುವಿನ ಕೆಚ್ಚಲು ಕತ್ತರಿಸಿದ್ದು, ಬ್ಯಾಂಕ್ ದರೋಡೆ, ಮಹಿಳೆ ಮೇಲೆ ಅತ್ಯಾಚಾರ ಮೊದಲಾದ ಘಟನೆಗಳನ್ನು ಕಡೆಗಣಿಸಿ ಸಮಾವೇಶ ಮಾಡಿದೆ. ಅಭಿವೃದ್ಧಿ ಬಗ್ಗೆ ಕೇಳಿದರೆ ಬಿಜೆಪಿ ಸರಕಾರದ ಅವಧಿಗೆ ಹೋಲಿಸುತ್ತಾರೆಂದರೆ ಕಾಂಗ್ರೆಸ್ ಹೇಗೆ ಭಿನ್ನವಾಗುತ್ತದೆ?. ಕಾಂಗ್ರೆಸ್ ಶಾಸಕರು ಅನುದಾನ ಸಿಕ್ಕಿಲ್ಲ ಎಂದು ಹೇಳುತ್ತಿದ್ದಾರೆ. ಗಾಂಧೀಜಿಯಂತೆ ಸರಳವಾಗಿರಬೇಕು ಎಂದು ಹೇಳಿದ್ದಾರೆ. ಆದರೆ ಕಟೌಟ್‍ಗಳ ವಿಜೃಂಭಣೆ ಅಲ್ಲಿ ಕಂಡುಬಂದಿದೆ. ಇದು ನಕಲಿ ಗಾಂಧಿಗಳ ಸಮಾವೇಶ ಎಂದರು.

ಕ್ಷಮೆ ಯಾಚಿಸಿ: ಕಿತ್ತೂರು ರಾಣಿ ಚೆನ್ನಮ್ಮ ಕರ್ನಾಟಕದ ವೀರ ಮಹಿಳೆ. ಅವರನ್ನು ಪ್ರಿಯಾಂಕಾ ವಾದ್ರಾಗೆ ಹೋಲಿಕೆ ಮಾಡುವುದು ಅಕ್ಷಮ್ಯ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡಲೇ ಜನರ ಕ್ಷಮೆ ಯಾಚಿಸಬೇಕು. ಇದರಿಂದ ಚೆನ್ನಮ್ಮಗೆ ಅಪಮಾನವಾಗಿದೆ. ಕಾಂಗ್ರೆಸ್ ಪಕ್ಷ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಸಂಘಟನಾ ಸಭೆ ನಡೆದಿದ್ದು, ತಾಲೂಕು ಪದಾಧಿಕಾರಿಗಳ ಆಯ್ಕೆ ಬಗ್ಗೆ ಚರ್ಚೆ ನಡೆದಿದೆ. ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಬಂದ ನಂತರ ರಾಜ್ಯಾಧ್ಯಕ್ಷರ ಚುನಾವಣೆ ಬಗ್ಗೆ ಚರ್ಚೆಯಾಗಲಿದೆ. ರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆ ನಾವು ಯಾರೂ ತೀರ್ಮಾನ ಮಾಡುವುದಿಲ್ಲ. ಅದನ್ನು ಹಿರಿಯ ನಾಯಕರು ಮಾತ್ರ ಮಾಡುತ್ತಾರೆ. ಶಿವರಾಜ್ ಸಿಂಗ್ ಚೌಹಾಣ್ ವರಿಷ್ಠರ ಜೊತೆ ಮಾತನಾಡಲಿದ್ದಾರೆ ಎಂದು ವಿವರಣೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News