ʼನಮ್ಮ ಮೆಟ್ರೋʼ ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ ರೀ ರೈಲ್‌: ಸಂಚಾರ ಭಾರಿ ವ್ಯತ್ಯಯ, ಪ್ರಯಾಣಿಕರ ಪರದಾಟ

Update: 2023-10-03 11:46 GMT

ಬೆಂಗಳೂರು: ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಸಂಚರಿಸಿದ ರೀ ರೈಲ್‌ ವಾಹನ ಆಯತಪ್ಪಿದ ಹಿನ್ನಲೆಯಲ್ಲಿ ಹಸಿರು ಮಾರ್ಗದ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ.

ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆಯಾದಾಗ ಸರಿಪಡಿಸಲು ಬಳಸುವ ರೀ ರೈಲ್ ರಾಜಾಜಿನಗರದ ಮೆಟ್ರೊ‌ ನಿಲ್ದಾಣದ ಸಮೀಪ‌ ಹಳಿ ತಪ್ಪಿದ ಪರಿಣಾಮ, ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಬೆಳಗ್ಗೆಯೇ ಕೆಲಸಕ್ಕೆ ತೆರಳುವವರು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.

ಸೋಮವಾರ ಮಧ್ಯರಾತ್ರಿ ಸಂಚರಿಸುತ್ತಿದ್ದಾಗ ರೀ ರೈಲು ಹಳಿ ತಪ್ಪಿದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ನಮ್ಮ ಮೆಟ್ರೋ, ʼʼನಮ್ಮ ಮೆಟ್ರೋ ಪ್ರಯಾಣಿಕರು ದಯವಿಟ್ಟು ಗಮನಿಸಿ, ರಾಜಾಜಿನಗರ ಮೆಟ್ರೊ ನಿಲ್ದಾಣದಲ್ಲಿ ತಾಂತ್ರಿಕ ಅಡಚಣೆಯಿಂದಾಗಿ ನಾಗಸಂದ್ರದಿಂದ ಯಶವಂತಪುರ ಮತ್ತು ಮಂತ್ರಿ ಸ್ಕ್ವೇರ್ ಸಂಪಿಗೆ ರಸ್ತೆಯಿಂದ ರೇಷ್ಮೆ ಸಂಸ್ಥೆ ಮೆಟ್ರೊ ನಿಲ್ದಾಣದ ನಡುವೆ ಮಾತ್ರ ಹಸಿರು ಮಾರ್ಗದಲ್ಲಿ ರೈಲು ಸೇವೆಗಳು ಲಭ್ಯವಿರುತ್ತವೆ. ಅಡಚಣೆಗಾಗಿ ವಿಷಾದಿಸುತ್ತೇವೆʼʼ ಎಂದು ಹೇಳಿದೆ. 

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News