ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣ | ನನ್ನ ತಪ್ಪಿದ್ದರೆ ರಾಜೀನಾಮೆ ಕೊಡಲು ಸಿದ್ಧ : ದಿನೇಶ್ ಗುಂಡೂರಾವ್

Update: 2024-12-06 06:41 GMT

ದಿನೇಶ್ ಗುಂಡೂರಾವ್

ಬೆಂಗಳೂರು :"ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣದಲ್ಲಿ ನನ್ನ ತಪ್ಪಿದ್ದರೆ ರಾಜೀನಾಮೆ ಕೊಡಲು ಸಿದ್ಧನಿದ್ದೇನೆ" ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಶುಕ್ರವಾರ ನಗರದಲ್ಲಿ ಮಾತನಾಡಿದ ಅವರು, "ಬಾಣಂತಿಯರ ಸಾವು ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಇಂಥಹ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕ್ರಮ ಆಗಲೇಬೇಕು. ಇದರಲ್ಲಿ ನನ್ನ ಪ್ರತಿಷ್ಠೆ ಏನಿಲ್ಲ. ನನ್ನ ತಪ್ಪಿದ್ದರೆ ರಾಜೀನಾಮೆ ಕೊಡಲೂ ಸಿದ್ಧ. ಈ ವಿಚಾರದಲ್ಲಿ ಪ್ರತಿಪಕ್ಷಗಳ ಸಹಕಾರವೂ ನಮಗೆ ಅಗತ್ಯ" ಎಂದು ಹೇಳಿದರು.

ʼಇಲ್ಲಿಯವರೆಗೆ ಈ ವರ್ಷ ರಾಜ್ಯದಲ್ಲಿ 327 ಮೆಟರ್ನಲ್ ಸಾವಾಗಿದೆ. ಎಲ್ಲವನ್ನೂ ಪರಿಶೀಲಿಸಿ ಎಂದು ಹೇಳಿದ್ದೇನೆ. ಇಂತಹ ಪ್ರಕರಣಗಳಲ್ಲಿ ಸಹನೆ ಇರಬಾರದು, ಕಠಿಣ ಕಾನೂನು ಕ್ರಮ ಆಗಬೇಕುʼ ಎಂದರು.

ಬಿಮ್ಸ್‌ನಲ್ಲಿ ಸಾವಿನ ಸಂಖ್ಯೆ ಐದಕ್ಕೆ ಏರಿಕೆ : 

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ 9 ಜನ ಬಾಣಂತಿಯರಿಗೆ ಸಮಸ್ಯೆ ಆಗಿತ್ತು, ಇದರಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಐದನೇಯವರು ಚಿಕಿತ್ಸೆ ಪಡೆಯುತ್ತಿದ್ದರು. ಅವರೂ ಮೃತಪಟ್ಟಿದ್ದಾರೆ. ಅದೇ ಬ್ಯಾಚ್​ನ ರಿಂಗರ್ ಲ್ಯಾಕ್ಟೇಟ್ ದ್ರಾವಣ‌ ಕೊಡಲಾಗಿತ್ತು. ಈಗಾಗಲೇ ಕಂಪೆನಿ ವಿರುದ್ಧ ಕ್ರಮಕ್ಕೆ ಮುಂದಾಗಿದ್ದೇವೆ. ಆದರೆ ಇವರಿಗೆ ಬೇರೆ ಆರೋಗ್ಯ ಸಮಸ್ಯೆಯೂ ಇತ್ತು. ಅವರು ಗುಣಮುಖರಾಗುತ್ತಾರೆ ಎಂದು ವೈದ್ಯರು ಹೇಳಿದ್ದರು. ಆದರೆ ಗುರುವಾರ ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ವೈದ್ಯರು ತಿಳಿಸಿದ್ದರು ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News