ಭಾರೀ ಮಳೆ | ಕರಾವಳಿ, ಮಲೆನಾಡಿನಲ್ಲಿ ಮುಂದುವರೆದ ʼರೆಡ್ ಅಲರ್ಟ್ʼ

Update: 2024-07-17 17:04 GMT
ಸಾಂದರ್ಭಿಕ ಚಿತ್ರ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಜೋರಗಿದ್ದು, ಕರಾವಳಿ ಮತ್ತು ಮಲೆನಾಡಿನ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಮುಂದುವರೆದಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಮುಂದಿನ 24 ಗಂಟಿಗೆ ಅನ್ವಯವಾಗುವಂತೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿಯಾದ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗವು ಪ್ರತಿ ಗಂಟೆಗೆ 30 ರಿಂದ 40 ಕಿಮೀ ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಅಲ್ಲಿನ ಜಿಲ್ಲೆಗಳಿಗೆ ನಿರಂತರ ಗಾಳಿಯ ವೇಗ 40 ರಿಂದ 50 ಕಿಮೀ ತಲುಪುವ ಸಾಧ್ಯತೆಯಿದೆ.

ಒಳನಾಡಿನ ಬೆಳಗಾವಿ ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಗಾಳಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಮತ್ತು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಗಾಳಿ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಡಿಗ್ರಿ ಮತ್ತು 21 ಡಿಗ್ರಿ ದಾಖಲಾಗಲಿದೆ ಎಂದಿದೆ.

ಮೀನುಗಾರರಿಗೆ ಎಚ್ಚರಿಕೆ: ತೀವ್ರ ಬಿರುಗಾಳಿ 45 ರಿಂದ 55 ಕಿಮೀ ವೇಗದಲ್ಲಿ ಬೀಸಲಿದೆ. ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಆದುದರಿಂದ ಮೀನುಗಾರರಿಗೆ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News