ಕೆಂಪುಕೋಟೆ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮಕ್ಕೆ ರಾಜ್ಯದ 6 ಮಂದಿ ಗ್ರಾ.ಪಂ.ಅಧ್ಯಕ್ಷರಿಗೆ ಆಹ್ವಾನ

Update: 2024-08-14 14:18 GMT

PC : PTI

ಬೆಂಗಳೂರು : ಹೊಸದಿಲ್ಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಗ್ರಾಮ ಪಂಚಾಯತಿಗಳ ಆರು ಮಂದಿ ಮಹಿಳಾ ಅಧ್ಯಕ್ಷರು ವಿಶೇಷ ಆಹ್ವಾನಿತರಾಗಿ ಆಮಂತ್ರಣಗೊಂಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬುಧವಾರ ಈ ಕುರಿತು ಪ್ರತಿಕ್ರಿಯಿಸಿದ ಅವರು, ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮ ಪಂಚಾಯತಿ ಅಧ್ಯಕ್ಷೆ ನಫೀಝಾ, ಗೌರಿಬಿದನೂರು ತಾಲೂಕಿನ ಗೆದರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಲಕ್ಷ್ಮೀನರಸಮ್ಮ, ಹುಕ್ಕೇರಿ ತಾಲೂಕಿನ ಕಮತನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ರಾಜೇಶ್ವರಿ ಗುತ್ತಿ, ತಾಜ್ ಸುಲ್ತಾನಪುರ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಜಯಶ್ರೀ, ಪೊನ್ನಂಪೇಟೆ ತಾಲೂಕಿನ ಕಾನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ದೇವಿ ಮತ್ತು ಚಾಮರಾಜನಗರ ತಾಲೂಕಿನ ಅಟ್ಟಗುಳಿಪುರ ಗ್ರಾಮ ಪಂಚಾಯತಿ ಅಧ್ಯಕ್ಷೆ ಶಿವಮ್ಮ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಆ.15ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಲಿರುವ ವಿಶೇಷ ಆಹ್ವಾನಿತರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್ ನೇತೃತ್ವದಲ್ಲಿ ಈ ತಂಡ ಸಮಾರಂಭದಲ್ಲಿ ಪಾಲ್ಗೊಳ್ಳಲಿದೆ. ಈ ಆರೂ ಮಂದಿ ಉತ್ತಮ ಆಡಳಿತ, ಪರಿಸರ ಕಾಳಜಿ, ನೈರ್ಮಲ್ಯ, ಘನತ್ಯಾಜ್ಯ ನಿರ್ವಹಣೆ, ತೆರಿಗೆ ಸಂಗ್ರಹಣೆ, ನೀರು ಸರಬರಾಜು ಮುಂತಾದ ಸಾಮಾಜಿಕ ಜವಾಬ್ದಾರಿಗಳನ್ನು ಅತ್ಯಂತ ಬದ್ಧತಾಪೂರ್ವಕವಾಗಿ ನಿರ್ವಹಿಸಿ ಈ ಗೌರವಕ್ಕೆ ಪಾತ್ರರಾಗಿರುವುದು ಕರ್ನಾಟಕಕ್ಕೆ ಹೆಮ್ಮೆ ತಂದಿದೆ ಎಂದೂ ಅವರು ಉಲ್ಲೇಖಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News