ಮತೀಯ ಗೂಂಡಾಗಿರಿ ನಡೆದರೆ ಸುಮ್ಮನೆ ಬಿಡುವುದಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್

Update: 2024-01-11 20:34 IST
ಮತೀಯ ಗೂಂಡಾಗಿರಿ ನಡೆದರೆ ಸುಮ್ಮನೆ ಬಿಡುವುದಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
  • whatsapp icon

ಬೆಂಗಳೂರು: ಮತೀಯ ಗೂಂಡಾಗಿರಿ ಘಟನೆಗಳನ್ನು ಹತ್ತಿಕ್ಕಲಾಗುವುದು. ಈ ಬಗ್ಗೆ ಇಲಾಖೆಯ ಅಧಿಕಾರಿಗಳಿಗೆ ಕೆಲವು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಯಾರೇ ಇರಲಿ ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಗೃಹ ಸಚಿವ ಡಾ.ಜಿ,ಪರಮೇಶ್ವರ್ ಹೇಳಿದ್ದಾರೆ.

ಗುರುವಾರ ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತೀಯ ಗೂಂಡಾಗಿರಿ ಎಲ್ಲಿ ನಡೆದರೂ ಕಾನೂನು ರೀತಿ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ರಾಮಮಂದಿರ ಉದ್ಘಾಟನೆಗೆ ಹೋಗದಿರಲು ತೀರ್ಮಾನಿಸಿರುವ ಪಕ್ಷದ ನಿಲುವಿನ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಮಮಂದಿರ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿಲ್ಲ. ಚುನಾವಣಾ ದೃಷ್ಟಿಯಿಂದ ತರಾತುರಿಯಲ್ಲಿ ಉದ್ಘಾಟನೆಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷದ ಹೈಕಮಾಂಡ್, ಉದ್ಘಾಟನೆಗೆ ಹೋಗದಿರಲು ನಿರ್ಧರಿಸಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News