ರೇಣುಕಾಸ್ವಾಮಿ ಹತ್ಯೆ ಪ್ರಕರಣ | ದರ್ಶನ್, ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಿಕೆ
Update: 2024-09-30 11:44 GMT
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.
ದರ್ಶನ್, ಪವಿತ್ರಗೌಡ ಸೇರಿದಂತೆ ಇತರೆ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು 57ನೇ ಸಿಸಿಎಚ್ ನ್ಯಾಯಾಲಯದ ನ್ಯಾಯಾಧೀಶರು ವಿಚಾರಣೆ ನಡೆಸಿದರು.
ಈ ವೇಳೆ ದರ್ಶನ್ ಪರ ವಕೀಲ ಸುನೀಲ್ ಕುಮಾರ್, ವಿಶೇಷ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಿದ್ದು, ವಾದ ಮಂಡಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಅಲ್ಲದೇ, ಹಿರಿಯ ವಕೀಲರು ಅನ್ಯ ಕಾರಣಕ್ಕಾಗಿ ಗೈರಾಗಿದ್ದಾರೆ. ಹೀಗಾಗಿ, ವಾದ ಮಂಡನೆಗೆ ಸಮಯ ನೀಡುವಂತೆ ಮನವಿ ಮಾಡಿದರು.
ಈ ಮನವಿ ಮಾನ್ಯ ಮಾಡಿದ ನ್ಯಾಯಾಧೀಶ ಜೈಶಂಕರ್ ಅವರು ವಿಚಾರಣೆಯನ್ನು ಆ.4ಕ್ಕೆ ಮುಂದೂಡಿದರು. ಇದೇ ವೇಳೆ ಪವಿತ್ರಾ ಗೌಡ, ರವಿಶಂಕರ್ ಸೇರಿ ಇನ್ನಿತರರ ಜಾಮೀನು ಅರ್ಜಿ ವಿಚಾರಣೆಯನ್ನೂ ಕೂಡ ನ್ಯಾಯಾಲಯ ಅ.4ಕ್ಕೆ ಮುಂದೂಡಿದೆ.