ರೇಣುಕಾಸ್ವಾಮಿ ಹತ್ಯೆ ಪ್ರಕರಣ | ನಟ ದರ್ಶನ್ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Update: 2024-12-09 11:53 GMT
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ದರ್ಶನ್ ಮತ್ತು ಇತರರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.
ದರ್ಶನ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಸರಕಾರ ಪರ ವಕೀಲರು ವಾದ ಮಂಡಿಸಿ, ಜಾಮೀನು ಷರತ್ತು ಉಲ್ಲಂಘನೆ ಆಗಿದೆ. ಹಾಗಾಗಿ ದರ್ಶನ್‌ಗೆ ನೀಡಿರುವ ಮಧ್ಯಂತರ ಜಾಮೀನು ಅರ್ಜಿ ವಜಾಗೊಳಿಸಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಪ್ರತಿವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್, ಯಾವುದೇ ಷರತ್ತು ಉಲ್ಲಂಘನೆ ಮಾಡಿಲ್ಲ ಎಂದರು. ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ತೀರ್ಪನ್ನು ಕಾಯ್ದಿಸಿದೆ. ಇದೇ ವೇಳೆ ಜಾಮೀನು ಅರ್ಜಿ ಆದೇಶ ನೀಡುವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶಿದೆ.