ಕೇಂದ್ರ ಬಜೆಟ್ | ʼಭದ್ರಾ ಮೇಲ್ದಂಡೆʼ ಯೋಜನೆಗೆ ಘೋಷಿತ ನೆರವು ಬಿಡುಗಡೆಗೆ ರಾಜ್ಯ ಸರಕಾರದಿಂದ ಮನವಿ

Update: 2024-06-22 14:01 GMT

ಬೆಂಗಳೂರು: ಕೇಂದ್ರದ ನೂತನ ಸರಕಾರವು ಬಜೆಟ್ ಮಂಡನೆ ಮಾಡಲಿರುವ ಹಿನ್ನೆಲೆಯಲ್ಲಿ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಈಗಾಗಲೆ ಘೋಷಿಸಲಾಗಿರುವ 5300 ಕೋಟಿ ರೂ.ನೆರವನ್ನು ಬಿಡುಗಡೆ ಮಾಡಿ ಮತ್ತು ಅದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದು ಸೇರಿದಂತೆ ಹಲವು ಮನವಿಗಳನ್ನು ರಾಜ್ಯ ಸರಕಾರ ಸಲ್ಲಿಸಿದೆ.

ಕರ್ನಾಟಕಕ್ಕೆ ಹಣಕಾಸು ಆಯೋಗ ಶಿಫಾರಸು ಮಾಡಿರುವ 11,495 ಕೋಟಿ ಅನುದಾನವನ್ನು ಬಿಡುಗಡೆ ಮಾಡಬೇಕು. ಸೆಸ್‍ಗಳು ಮತ್ತು ಸರ್ ಚಾರ್ಜ್‍ಗಳನ್ನು ವಿಭಾಗಿಸಬಹುದಾದ ಪೂಲ್‍ಗೆ ಸೇರಿಸಿ ಇದರಿಂದ ರಾಜ್ಯಗಳು ಕೇಂದ್ರ ತೆರಿಗೆಗಳಲ್ಲಿ ತಮ್ಮ ಸರಿಯಾದ ಪಾಲನ್ನು ಪಡೆಯಬಹುದು ಎಂದು ರಾಜ್ಯ ಸರಕಾರ ತಿಳಿಸಿದೆ.

ಬೆಂಗಳೂರು ಅಭಿವೃದ್ಧಿ ಮತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಎಸ್ಪಿ ಪ್ಯಾಕೇಜ್ ಅನ್ನು ಘೋಷಿಸಬೇಕು. ಅಂಗನವಾಡಿ, ಆಶಾ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರಿಗೆ ಗೌರವಧನವನ್ನು ಹೆಚ್ಚಿಸಬೇಕು. ವಸತಿ ಯೋಜನೆಗಳಲ್ಲಿ ಫಲಾನುಭವಿಗಳಿಗೆ ನೀಡಲಾಗುವ ಭಾರತ ಸರಕಾರದ ಪಾಲನ್ನು ನಗರ ಪ್ರದೇಶದಲ್ಲಿ 1.5 ರಿಂದ 5 ಲಕ್ಷ ರೂ.ಗಳಿಗೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 1.2 ರಿಂದ 3 ಲಕ್ಷ ರೂ.ಗಳಿಗೆ ಹೆಚ್ಚಿಸಬೇಕು.

ರಾಯಚೂರಿಗೆ ಏಮ್ಸ್ ಘೋಷಿಸುವುದು ಸೇರಿದಂತೆ ಹಲವು ಸಲಹೆಗಳನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News