‘ಇಸ್ರೋ ಸಂಸ್ಥೆ’ಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಸಿಎಂ ಸಿದ್ದರಾಮಯ್ಯಗೆ ಮನವಿ
Update: 2023-09-04 15:39 GMT
ಬೆಂಗಳೂರು, ಸೆ.4: ಚಂದ್ರಯಾನ-3 ಅನ್ನು ಯಶಸ್ವಿಗೊಳಿಸಿದ ಇಸ್ರೋ ವಿಜ್ಞಾನಿಗಳನ್ನು ಮತ್ತಷ್ಟು ಉತ್ತೇಜಿಸಲು ರಾಜ್ಯ ಸರಕಾರ ಸಂಸ್ಥೆಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಬೇಕೆಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಳಿಸಿ ಅಲ್ಲಿನ ವಿದ್ಯಮಾನಗಳ ಬಗ್ಗೆ ಮಾಹಿತಿಯನ್ನು ಪಡೆಯುತ್ತಿರುವ ಇಸ್ರೋ ವಿಜ್ಞಾನಿಗಳ ಕಾರ್ಯ ವಿಶ್ವವೇ ಬೆರಗಾಗುವಂತೆ ಮಾಡಿದೆ. ಅವರ ಸಾಧನೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರಕಾರ ಸಂಸ್ಥೆಯ ವಿಜ್ಞಾನಿಗಳಿಗೆ ವಸತಿ ಸಮುಚ್ಚಯ ರೂಪಿಸಲು ಬೆಂಗಳೂರಿನ ಅಕ್ಕಪಕ್ಕದಲ್ಲಿ 25 ಎಕರೆ ಜಮೀನನ್ನು ನೀಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.