ಬಿಜೆಪಿ ಶಾಸಕ ಮುನಿರತ್ನ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸುವಂತೆ ಸಿಎಂಗೆ ಮನವಿ
Update: 2024-09-20 07:06 GMT
ಬೆಂಗಳೂರು : ಒಕ್ಕಲಿಗ ಸಮುದಾಯದ ಸಚಿವರು, ಶಾಸಕರ ನಿಯೋಗ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ಅವರ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಮನವಿ ಸಲ್ಲಿಸಿತು.
ಈ ನಿಯೋಗದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಉನ್ನತ ಶಿಕ್ಷಣ ಸಚಿವ ಡಾ.ಎಂಸಿ.ಸುಧಾಕರ್, ಶಾಸಕರಾದ ರಂಗನಾಥ್, ಶರತ್ ಬಚ್ಚೇಗೌಡ, ಪುಟ್ಟಣ್ಣ, ಮರಿತಿಬ್ಬೇಗೌಡ ಸೇರಿದಂತೆ ಮತ್ತಿತರರು ಇದ್ದರು.
ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನ್ಯಾಯಾಂಗದ ಬಂಧನದಲ್ಲಿದ್ದ ಮುನಿರತ್ನ ಅವರು ನಿನ್ನೆ(ಗುರುವಾರ) ಷರತ್ತುಬದ್ಧ ಜಾಮೀನನ ಮೇಲೆ ಬಿಡುಗಡೆಯಾಗಿದ್ದರು. ಆದರೆ ಇಂದು ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಮುನಿರತ್ನ ಅವರನ್ನು ಬಂಧಿಸಲಾಗಿದೆ.