ದೇವಾಲಯಗಳ ನೋಂದಾಯಿಸಲು ಸಚಿವರಿಗೆ ಮನವಿ

Update: 2023-09-25 18:32 GMT

ಬೆಂಗಳೂರು, ಸೆ.25: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡದ ರಾಜ್ಯದ ದೇವಾಲಯಗಳನ್ನು ಕಡ್ಡಾಯವಾಗಿ ನೋಂದಣಿ ಮಾಡಲು ಹಾಗೂ ದೇವಾಲಯಗಳ ಆಸ್ತಿ, ಚಿನ್ನಾಭರಣ ಸೇರಿದಂತೆ ಒಟ್ಟು ಸಂಪನ್ಮೂಲಗಳನ್ನು ದಾಖಲಿಸಬೇಕು ಎಂದು ನೈಜ ಹೋರಾಟಗಾರರ ವೇದಿಕೆಯ ನಿಯೋಗ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ನೀಡಿದೆ.

ಹಿಂದಿನ ಸರಕಾರದ ಮುಜರಾಯಿ ಇಲಾಖೆ ಸಚಿವರು ಅಸಂವಿಧಾನಿಕವಾಗಿ ಟಿಪ್ಪಣಿ ಹೊರಡಿಸಿ ದೇವಾಲಯಗಳ ನೋಂದಾವಣೆಗೆ ತಡೆಯಾಜ್ಞೆ ತಂದು ಕಾನೂನುಗಳನ್ನು ಉಲ್ಲಂಘಿಸಿದ್ದರು. ಇಂತಹ ಟಿಪ್ಪಣಿಗೆ ಕಾನೂನಿನಲ್ಲಿ ಯಾವುದೇ ಮಾನ್ಯತೆಯಿಲ್ಲ. ಇದನ್ನು ಈಗಿನ ಸರಕಾರ ಪರಿಗಣಿಸಿ ಇಲಾಖೆಗೆ ದೇವಾಲಯಗಳ ನೋಂದಾವಣೆ ಮಾಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ರಾಜ್ಯದ ಹಲವರು ದೇವಸ್ಥಾನಗಳು ಬಹಳ ದೊಡ್ಡ ಪ್ರಮಾಣದ ಭಕ್ತ ಸಮೂಹವನ್ನು ಹೊಂದಿದ್ದು, ಇಂತಹ ದೇವಸ್ಥಾನಗಳು ಜನರ ಭಕ್ತಿ, ನಂಬಿಕೆ ಹಾಗೂ ಧಾರ್ಮಿಕ ಭಾವನೆಗಳನ್ನು ದುರುಪಯೋಗಪಡಿಸಿಕೊಂಡು ಸಾರ್ವಜನಿಕರಿಂದ ವಿವಿಧ ಬಗೆಯ ಪೂಜೆಗಳನ್ನು ಮಾಡಿಸಲು ಮತ್ತು ಚಿನ್ನಾಭರಣ, ಜಮೀನು, ಹಣದ ರೂಪದಲ್ಲಿ ಹರಕೆಯ ಕಾಣಿಕೆಗಳನ್ನು ಪಡೆಯುತ್ತಿದ್ದು, ಈ ರೀತಿಯ ವ್ಯಾಪಾರೀಕರಣವನ್ನು ಸರಕಾರ ತಪ್ಪಿಸಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News