ಉಪಜಾತಿಗಳಿಗೆ ಸಿಗದ ಮೀಸಲು ಸೌಲಭ್ಯ: ಸಚಿವ ಎಂ.ಬಿ.ಪಾಟೀಲ್

Update: 2023-12-18 14:50 GMT

ಬೆಂಗಳೂರು: ಒಂದೇ ಜಾತಿಗೆ ಸೇರಿದ ಉಪಜಾತಿಗಳಿಗೆ ಮೀಸಲು ಸೌಲಭ್ಯ ಸಿಗುವುದಕ್ಕೆ ಸಂಬಂಧಿಸಿದಂತೆ ಗೊಂದಲಗಳಿವೆ. ಇದನ್ನು ಸರಿಪಡಿಸಿ ಎಂದಷ್ಟೇ ನಾವು ಮುಖ್ಯಮಂತ್ರಿ ಬಳಿ ಕೇಳಿಕೊಂಡಿದ್ದೇವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ವೈಜ್ಞಾನಿಕ ಜಾತಿಗಣತಿ ನಡೆಸುವಂತೆ ಆಗ್ರಹಿಸಿ ‘ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ' ವತಿಯಿಂದ ಮುಖ್ಯಮಂತ್ರಿಗೆ ನೀಡಿರುವ ಮನವಿ ಪತ್ರಕ್ಕೆ ಸಹಿ ಹಾಕಿರುವವರ ಪೈಕಿ ಒಬ್ಬರಾದ ಸಚಿವ ಎಂ.ಬಿ.ಪಾಟೀಲ್, ಈ ಸಂಬಂಧ ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಇರುವ ಸಮಸ್ಯೆಗಳನ್ನು ಮುಖ್ಯಮಂತ್ರಿಯ ಗಮನಕ್ಕೆ ತರುವುದರಲ್ಲಿ ಯಾವುದೇ ತಪ್ಪು ಇಲ್ಲ. ಉದಾಹರಣೆಗೆ, ಲಿಂಗಾಯತರಲ್ಲಿ ಗಾಣಿಗ, ಸಾದರ ಹೀಗೆ 50ಕ್ಕೂ ಹೆಚ್ಚು ಉಪಜಾತಿಗಳು ಇದ್ದು ಅವರಿಗೆ ಲಿಂಗಾಯತ-ಗಾಣಿಗ, ಲಿಂಗಾಯತ-ಸಾದರ ಎಂದು ನಮೂದಿಸಿದ್ದರೆ 2ಎ ಪ್ರವರ್ಗದಡಿ ಮೀಸಲಾತಿ ಸಿಗುವುದಿಲ್ಲ ಎಂದು ಅವರು ಹೇಳಿದರು.

ಈ ಕಾರಣಕ್ಕೆ ಅವರೆಲ್ಲ ಹಿಂದೂ-ಗಾಣಿಗ ಹಿಂದೂ-ಸಾದರ ಎಂದು ನಮೂದಿಸಿಕೊಳ್ಳುತ್ತಾರೆ. ಇಂತಹ ಸಮಸ್ಯೆಗಳನ್ನು ಸರಿಪಡಿಸಲು ನಾವು ಮುಖ್ಯಮಂತ್ರಿಯನ್ನು ಕೋರಿದ್ದೇವೆ. ಈ ತೊಂದರೆಗಳ ಬಗ್ಗೆ ಅವರಿಗೂ ಗೊತ್ತಿದೆ. ಇಂತಹ ತೊಡಕುಗಳು ಒಕ್ಕಲಿಗ ಜನಾಂಗ ಸೇರಿದಂತೆ ಬೇರೆ ಸಮುದಾಯಗಳಿಗೂ ಇರಬಹುದು. ಇದ್ದರೆ, ಅವನ್ನು ಕೂಡ ಸರಿಪಡಿಸುವುದರಲ್ಲಿ ತಪ್ಪೇನಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News