ನಾಯಿಮರಿಗಳ ಸಾವಿನ ಹೊಣೆ: ವೃದ್ಧ ಮಹಿಳೆಗೆ ವಿಧಿಸಿದ್ದ 1 ಸಾವಿರ ರೂ.ದಂಡ ಹೆಚ್ಚಳಕ್ಕೆ ಹೈಕೋರ್ಟ್ ನಕಾರ

Update: 2024-01-18 16:44 GMT

ಬೆಂಗಳೂರು: ಎಂಟು ನಾಯಿಮರಿಗಳ ಸಾವಿಗೆ ಕಾರಣವಾಗಿದ್ದ 72 ವರ್ಷದ ವೃದ್ಧೆಗೆ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ 1 ಸಾವಿರ ರೂ. ದಂಡ ಹೆಚ್ಚಳ ಮಾಡುವಂತೆ ಕೋರಿದ್ದ ಅರ್ಜಿಯನ್ನು ವಜಾ ಮಾಡಿರುವ ಹೈಕೋರ್ಟ್, ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ.

ನಾಯಿಮರಿಗಳ ಸಾವಿಗೆ ಕಾರಣವಾಗಿದ್ದ ಆರೋಪಿ ಮಹಿಳೆಗೆ ಕೇವಲ ಒಂದು ಸಾವಿರ ರೂಪಾಯಿ ದಂಡ ವಿಧಿಸಿದ್ದ ವಿಚಾರಣಾಧೀನ ನ್ಯಾಯಾಲಯದ ಆದೇಶ ಪ್ರಶ್ನಿಸಿ ಪ್ರಾಣಿ ಕಲ್ಯಾಣ ಅಧಿಕಾರಿ ಕೆ.ಬಿ.ಹರೀಶ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು.

ಆರೋಪಿ ಪೊನ್ನಮ್ಮಗೆ ಸದ್ಯ 72 ವಯಸ್ಸಾಗಿದ್ದು, ತಪ್ಪೊಪ್ಪಿಕೊಂಡಿದ್ದಾರೆ. ವಿಚಾರಣಾಧೀನ ನ್ಯಾಯಾಲಯದ ನ್ಯಾಯಾಧೀಶರು ವಿವೇಚನಾಧಿಕಾರ ಬಳಸಿ ಆಕೆಗೆ ಶಿಕ್ಷೆ (1 ಸಾವಿರ ರೂ.) ವಿಧಿಸಿದ್ದಾರೆ. ದಂಡದ ಮೊತ್ತವನ್ನೂ ಪಾವತಿ ಮಾಡಲಾಗಿದೆ ಎಂದು ತಿಳಿಸಿರುವ ಪೀಠವು ಶಿಕ್ಷೆ ಪ್ರಮಾಣ ಹೆಚ್ಚಳಕ್ಕೆ ನಿರಾಕರಿಸಿದೆ.

2016ರ ಮಾ.15ರಂದು ಆರೋಪಿ ಪೊನ್ನಮ್ಮ ಮನೆಯ ಮುಂದೆ ಚರಂಡಿಯಲ್ಲಿ ನಾಯಿಯೊಂದು ಎಂಟು ಮರಿಗಳನ್ನು ಹಾಕಿತ್ತು. ಅದರ ಗದ್ದಲದಿಂದ ಬೇಸತ್ತಿದ್ದ ಆಕೆಯು 20 ದಿನದ ನಾಯಿ ಮರಿಗಳನ್ನು ಖಾಲಿ ನಿವೇಶನದಲ್ಲಿರಿಸಿದ್ದರು. ಇದರಿಂದ ನಾಯಿ ಮರಿಗಳ ಬಳಿ ಬರಲಾಗಿರಲಿಲ್ಲ. ಬದಲಿಗೆ ಮರಿಗಳು ತಾಯಿಯಲ್ಲಿಗೆ ಹೋಗುವುದಕ್ಕೆ ಸಾಧ್ಯವಾಗಿರಲಿಲ್ಲ. ಇದರಿಂದಾಗಿ ಮರಿಗಳಿಗೆ ಸೂಕ್ತ ಸಮಯಕ್ಕೆ ಹಾಲು ಸಿಗದೆ ಸಾವನ್ನಪ್ಪಿದ್ದವು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News