ಜಾನುವಾರು ಆಕಸ್ಮಿಕ ಸಾವಿನ ಸಂದರ್ಭ ರೈತರ ಸಂಕಷ್ಟ ನಿವಾರಣೆಗೆ ಅನುಗ್ರಹ ಯೋಜನೆ ಪುನರಾರಂಭ: ಸಿಎಂ ಸಿದ್ದರಾಮಯ್ಯ
Update: 2023-07-07 08:26 GMT
ಬೆಂಗಳೂರು: ನಮ್ಮ ಸರಕಾರದ ಹಿಂದಿನ ಅವಧಿಯಲ್ಲಿ ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುವ ಸಂಕಷ್ಟ ನಿವಾರಣೆಗೆ ಅನುಗ್ರಹ ಯೋಜನೆಯನ್ನು ಆರಂಭಿಸಿತ್ತು. ಆದರೆ ಹಿಂದಿನ ಸರಕಾರ ಅದನ್ನು ನಿರ್ಲಕ್ಷಿಸಿರುವುದು ಅವರ ರೈತ ವಿರೋಧಿ ಧೋರಣೆಯನ್ನು ಬಿಂಬಿಸುತ್ತದೆ. ಈ ಯೋಜನೆಯನ್ನು ಪುನರ್ ಸ್ಥಾಪಿಸಿ ಕುರಿ ಹಾಗೂ ಮೇಕೆಗೆ 5000 ರೂ. ಹಾಗೂ ಹಸು, ಎಮ್ಮೆ ಹಾಗೂ ಎತ್ತುಗಳಿಗೆ 10 ಸಾವಿರ ರೂ. ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.
ಗೋವಿನಿಂದ ಗ್ರಾಹಕರ ವರೆಗೆ ಗುಣಮಟ್ಟದ ಶ್ರೇಷ್ಠತೆ ಎಂಬ ಧ್ಯೇಯವಾಕ್ಯ ಹೊಂದಿರುವ ನಂದಿನಿ ಕೋಟ್ಯಂತರ ಜನರ ಬದುಕಿಗೆ ಆಸರೆಯಾಗಿದೆ. ನಂದಿನಿ ಬ್ರ್ಯಾಂಡ್ ಕನ್ನಡಿಗರೊಂದಿಗೆ ಭಾವನಾತ್ಮಕ ಬೆಸುಗೆ ಹೊಂದಿದ್ದು ಅದನ್ನು ಇನ್ನಷ್ಟು ಬೆಳೆಸಲು ಸರಕಾರ ಬದ್ಧವಾಗಿದೆ ಎಂದರು.