ಮಡಿಕೇರಿ | ನಿವೃತ್ತ ಯೋಧ ನಾಪತ್ತೆ; ಪಂಪಿನ ಕೆರೆಯಲ್ಲಿ ಶೋಧ
Update: 2023-11-07 14:19 GMT
ಮಡಿಕೇರಿ ನ.7 : ನಿವೃತ್ತ ಯೋಧರೊಬ್ಬರು ನಾಪತ್ತೆಯಾಗಿರುವ ಪ್ರಕರಣ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ನಗರದ ಉಕ್ಕುಡ ನಿವಾಸಿ ಸಂದೇಶ್(38) ಎಂಬುವವರೇ ನಾಪತ್ತೆಯಾದ ಯೋಧ ಎಂದು ತಿಳಿದು ಬಂದಿದೆ.
ಪತ್ರವೊಂದು ಸಿಕ್ಕಿರುವ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿ ನಗರದ ಪಂಪಿನ ಕೆರೆಯಲ್ಲಿ ನಗರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಇಂದು ತೀವ್ರ ಶೋಧ ಕಾರ್ಯ ನಡೆಸಿದರು.
ಕತ್ತಲಾದ ಹಿನ್ನೆಲೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು. ಬುಧವಾರ ಮತ್ತೆ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎರಡು ತಿಂಗಳ ಹಿಂದೆಯಷ್ಟೇ ಸೇನೆಯಿಂದ ನಿವೃತ್ತಿಯಾಗಿದ್ದ ಸಂದೇಶ್ ಗೆ ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿ ಇದ್ದಾರೆ.