ರಾಜಕೀಯ ಪಕ್ಷಗಳಿಂದ ಉಚಿತ ಗ್ಯಾರಂಟಿಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ನಿವೃತ್ತ ಯೋಧರು

Update: 2023-12-07 13:56 GMT

ಬೆಂಗಳೂರು: ಚುನಾವಣೆ ನಡೆಯುತ್ತಿರುವ ವೇಳೆ ರಾಜಕೀಯ ಪಕ್ಷಗಳು ಮತದಾರರಿಗೆ ನೀಡುತ್ತಿರುವ ಉಚಿತ ಗ್ಯಾರಂಟಿ ಆಮಿಷಗಳಿಗೆ ನಿರ್ಬಂಧ ವಿಧಿಸುವಂತೆ ಕೋರಿ ಹೈಕೋರ್ಟ್‍ನಲ್ಲಿ ನಿವೃತ್ತ ಸೈನಿಕರು ಅರ್ಜಿ ಸಲ್ಲಿಸಿದ್ದಾರೆ.

ಬ್ರಿಗೇಡಿಯರ್ ರವಿ, ಮುನಿಸ್ವಾಮಿ ಇನ್ನಿತರರು ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಅರ್ಜಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ, ಕೇಂದ್ರ ಚುನಾವಣಾ ಆಯೋಗ, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮತ್ತು ಎನ್‍ಸಿಪಿ ಪಕ್ಷಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಅಧಿಕಾರವನ್ನು ಹಿಡಿಯಲು ರಾಜಕೀಯ ಪಕ್ಷಗಳು ಮತದಾರರಿಗೆ ಆಮಿಷ ಒಡ್ಡುತ್ತಿವೆ. ಹೀಗಾಗಿ, ಅಂತಹ ಅಭ್ಯರ್ಥಿಗಳು ಮತ್ತು ಪಕ್ಷಗಳ ವಿರುದ್ಧ ಕ್ರಮಕ್ಕೆ ಮುಂದಾಗಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಜನರ ತೆರಿಗೆ ಹಣದಲ್ಲಿ ಅಧಿಕಾರದ ಆಸೆಗೆ ಮತದಾರರಿಗೆ ಆಮಿಷವೊಡ್ಡಿ ಅವರನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ದೇಶದ ಅಭಿವೃದ್ಧಿಗೆ ಬೊಕ್ಕಸದ ಹಣ ಬಳಸುವ ಬದಲು ಆಮಿಷಕ್ಕೆ ಬಳಕೆ ಮಾಡಲಾಗುತ್ತಿದೆ. ಮತದಾರರಿಗೆ ಆಸೆ ಒಡ್ಡಿ ಮತ ಕೇಳುವುದು ಸಂವಿಧಾನಬಾಹಿರ ಹಾಗೂ ಜನಪ್ರತಿನಿಧಿಗಳ ಕಾಯಿದೆಯ ಸ್ಪಷ್ಟ ಉಲ್ಲಂಘನೆಯಾಗುತ್ತದೆ. ಹೀಗಾಗಿ ಸೂಕ್ತ ಮಾರ್ಗಸೂಚಿ ರೂಪಿಸಲು ಚುನಾವಣಾ ಆಯೋಗಕ್ಕೆ ಸೂಚನೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News