ಸಣ್ಣ ನೇಕಾರರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ ಬಗ್ಗೆ ಪರಿಶೀಲಿಸಿ ಶೀಘ್ರದಲ್ಲೇ ತೀರ್ಮಾನ: ಸಿಎಂ ಸಿದ್ದರಾಮಯ್ಯ

Update: 2023-08-25 17:44 GMT

ಬೆಂಗಳೂರು, ಆ.25: ಮಹತ್ವದ ಬೆಳವಣಿಗೆಯಲ್ಲಿ ಸಣ್ಣ ನೇಕಾರರಿಗೆ 10 ಹೆಚ್.ಪಿ ವರೆಗೆ ಸಂಪೂರ್ಣ ಉಚಿತ ವಿದ್ಯುತ್ ನೀಡುವ ಕುರಿತಂತೆ ಪರಿಶೀಲಿಸಿ ಸದ್ಯದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ 10 ಹೆಚ್ ಪಿ ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳಿಗೆ ವಿದ್ಯುತ್ ಒದಗಿಸುವ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಬಗ್ಗೆ ಶುಕ್ರವಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ನಿರ್ಧಾರ ಕೈಗೊಂಡರು.

10 ಹೆಚ್.ಪಿ ವರೆಗೂ ಉಚಿತ ವಿದ್ಯುತ್ ನೀಡಬೇಕು ಎನ್ನುವ ಬೇಡಿಕೆ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. 10 ಹೆಚ್ ಪಿ ಗಿಂತ ಹೆಚ್ಚಿನ ವಿದ್ಯುತ್ ಬಳಸುವ ಮಗ್ಗಗಳ ಬಗ್ಗೆಯೂ ಚರ್ಚಿಸಲಾಯಿತು. ಎರಡೂ ವಿಚಾರಗಳ ಬಗ್ಗೆ ಪರಿಶೀಲಿಸಿ ಸದ್ಯದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಈ ಹಿಂದೆ ನೇಕಾರರಿಗೆ ಉಚಿತ ವಿದ್ಯುತ್ ನೀಡುವ ಬಗ್ಗೆ ಭರವಸೆ ನೀಡಿದ್ದೆ. ಇದರಿಂದ ಸಣ್ಣ ನೇಕಾರರಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕೈಮಗ್ಗ ಮತ್ತು ಜವಳಿ ಇಲಾಖೆ ಆಯುಕ್ತ ಗೌರವ್ ಗುಪ್ತಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಾಂ, ಜವಳಿ ಇಲಾಖೆ ಕಾರ್ಯದರ್ಶಿ ಪಿ.ಎಸ್.ಎನ್.ಕುಮಾರ್ ಉಪಸ್ಥಿತರಿದ್ದರು.


Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News