ಹಾಸನ: ಹಾಡಹಗಲೇ ನಡುರಸ್ತೆಯಲ್ಲಿ ರೌಡಿಶೀಟರ್‌ ಹತ್ಯೆ

Update: 2023-07-04 12:29 GMT
ಕೊಲೆಗೀಡಾದ ರೌಡಿಶೀಟರ್

ಚನ್ನರಾಯಪಟ್ಟಣ (ಹಾಸನ): ಹಾಡಹಗಲೇ ರೌಡಿಶೀಟರ್ ಓರ್ವನನ್ನು ರಸ್ತೆಯಲ್ಲಿ ಅಟ್ಟಾಡಿಸಿ ಕೊಲೆ ಮಾಡಿರುವ ಘಟನೆ ಚನ್ನರಾಯಪಟ್ಟಣದ ಬೆಂಗಳೂರು ರಸ್ತೆಯ ಧನಲಕ್ಷ್ಮಿ ಚಿತ್ರ ಮಂದಿರದ ಎದುರು ಮಂಗಳವಾರ ಸಂಜೆ ವರದಿಯಾಗಿದೆ. 

ಮಾಸ್ತಿಗೌಡ ಅಲಿಯಾಸ್ ಕೃಷ್ಣ (30) ಹತ್ಯೆಗೀಡಾದ ರೌಡಿಶೀಟರ್ ಆಗಿದ್ದು, ಕಾರಿನಲ್ಲಿ ಬಂದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆಂದು ಆರೋಪಿಸಲಾಗಿದೆ. 

 ಕಾರಿನಲ್ಲಿ ಬಂದ ದುಷ್ಕರ್ಮಿಗಳು, ಕೃಷ್ಣನನ್ನು ಬೆನ್ನಟ್ಟಿದ್ದಾರೆ. ಆತ ಓಡಲು ಆರ೦ಭಿಸುತ್ತಿದ್ದಂತೆಯೇ ನಡುರಸ್ತೆಯಲ್ಲಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ ಎಂದು ಹೇಳಲಾಗಿದೆ.

ತಲೆ ಸೇರಿದಂತೆ ದೇಹದ ವಿವಿಧ ಭಾಗಳಿಗೆ ಗಂಭೀರ ಗಾಯಗಳಾಗಿದ್ದು, ಮಾಸ್ತಿಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾನೆನ್ನಲಾಗಿದೆ. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News