ಕೊಬ್ಬರಿ ಬೆಳೆಗಾರರಿಗೆ ಕ್ವಿಂಟಾಲ್ ಗೆ 1500ರೂ ಪ್ರೋತ್ಸಾಹ ಧನ: ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2024-01-21 13:15 GMT

ತುಮಕೂರು: ರಾಜ್ಯ ಸರಕಾರ ದಿಂದ ಕೊಬ್ಬರಿ ಬೆಳೆಗಾರರಿಗೆ ಕೇಂದ್ರ ಸರಕಾರ ನೀಡುವ ಕನಿಷ್ಠ ಬೆಂಬಲ ಬೆಲೆ 12000 ರೂ.ಗಳೊಂದಿಗೆ 1500 ರೂ. ಗಳನ್ನು ಹೆಚ್ಚುವರಿಯಾಗಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ಸಿದ್ದಗಂಗಾ ಮಠದ ಕಾರ್ಯಕ್ರಮದ ನಂತರ ತಮ್ಮನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ರೈತರ ನಿಯೋಗದೊಂದಿಗೆ ಮಾತುಕತೆ ನಡೆಸಿದ ನಂತರ ಮಾಧ್ಯಮದರೊಂದಿಗೆ ಮಾತನಾಡಿದರು.

ʼಒಟ್ಟು ನಮ್ಮ ಸರಕಾರದಿಂದ‌ ಕೊಬ್ಬರಿ ಕ್ವಿಂಟಾಲ್ ಗೆ 1500 ರೂ.ಗಳನ್ನು ಒದಗಿಸಲಾಗುವುದು. 3000 ರೂ.ಗಳಿಗೆ ಬೇಡಿಕೆ ಇದ್ದರೂ ಸರಕಾರದ ತನ್ನ ಶಕ್ತ್ಯಾನುಸಾರ ಬೆಂಬಲ ಬೆಲೆ ನೀಡುತ್ತಿದ್ದು, ಎಂ.ಎಸ್.ಪಿ ದರ ನಿಗದಿ ಮಾಡುವುದು ಕೇಂದ್ರ ಸರಕಾರದ್ದು ಎಂದರು. ಕೇಂದ್ರ ಸರಕಾರ ನಿಗದಿ ಮಾಡಿರುವುದಕ್ಕಿಂತ ರಾಜ್ಯ ಸರಕಾರ ಕೊಬ್ಬರಿ ಬೆಳೆಗಾರರಿಗೆ 1500 ಹೆಚ್ಚಾಗಿ ನೀಡಲಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News