ಭಾಷಾ ವಿಜ್ಞಾನಿ ಪ್ರೊ.ಕೆ.ವಿ.ನಾರಾಯಣ ಅವರಿಗೆ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ

Update: 2024-12-18 15:40 GMT

ಪ್ರೊ.ಕೆ.ವಿ.ನಾರಾಯಣ

ಬೆಂಗಳೂರು : ಪ್ರಸ್ತುತ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಷಾ ವಿಜ್ಞಾನಿ ಹಾಗೂ ವಿಮರ್ಶಕ ಪ್ರೊ.ಕೆ.ವಿ.ನಾರಾಯಣ ಭಾಜನರಾಗಿದ್ದಾರೆ.

ಕೆ.ವಿ.ನಾರಾಯಣ ಅವರ ‘ನುಡಿಗಳ ಅಳಿವು’ ಎಂಬ ಸಾಹಿತ್ಯ ವಿಮರ್ಶಾ ಕೃತಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು 1.ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.

2025ರ ಮಾ.8ರಂದು ಹೊಸದಿಲ್ಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಕನ್ನಡ ವಿಭಾಗದ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ವಿಮರ್ಶಕ ಒ.ಎಲ್.ನಾಗಭೂಷಣ ಸ್ವಾಮಿ, ಡಾ.ಹಳೆಮನಿ ರಾಜಶೇಖರ್ ಮತ್ತು ಡಾ.ಸರೂಜ್ ಕಾಟ್ಕರ್ ಇದ್ದರು.

ಕೆ.ವಿ.ನಾರಾಯಣ ಅವರು ಸೇರಿ, 21 ಭಾಷೆಗಳ ಲೇಖಕರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಉರ್ದು, ಡೋಗ್ರಿ ಹಾಗೂ ಬಂಗಾಳಿ ಭಾಷೆಯ ಪ್ರಶಸ್ತಿಗಳನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News