ʼವಾರ್ತಾಭಾರತಿʼ ಅಂಕಣಕಾರ ಸನತ್ ಕುಮಾರ್ ಬೆಳಗಲಿಯವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
Update: 2024-10-30 11:28 GMT
ಬೆಂಗಳೂರು : ಹಿರಿಯ ಪತ್ರಕರ್ತರು, ಸಾಮಾಜಿಕ ಚಿಂತಕರು ಮತ್ತು ವಾರ್ತಾಭಾರತಿಯ ಅಂಕಣಕಾರರಾದ ಸನತ್ ಕುಮಾರ್ ಬೆಳಗಲಿ ಅವರಿಗೆ 2024ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದೆ.
ಸನತ್ ಕುಮಾರ್ ಬೆಳಗಲಿಯವರ ಪತ್ರಿಕೋದ್ಯಮ ಕ್ಷೇತ್ರದಲ್ಲಿನ ಸೇವೆ ಗುರುತಿಸಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ನವೆಂಬರ್ 1 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಸನತ್ ಕುಮಾರ್ ಬೆಳಗಲಿಯವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.