‘ಕಟ್ಟಡ ಕಾರ್ಮಿಕರ ಹೆಸರಿನಲ್ಲಿ’ 26 ಲಕ್ಷ ನಕಲಿ ಚೀಟಿ ರದ್ದು: ಸಂತೋಷ್ ಲಾಡ್

Update: 2025-03-05 18:16 IST
Photo of  Santhosh Lad

 ಸಂತೋಷ್ ಲಾಡ್

  • whatsapp icon

ಬೆಂಗಳೂರು : ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಚೀಟಿಗಳನ್ನು ತಪಾಸಣೆ ನಡೆಸಿ 26 ಲಕ್ಷ ನಕಲಿ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಬುಧವಾರ ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಮಹೇಶ್ ಟೆಂಗಿನಕಾಯಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಕಲಿ ಚೀಟಿಗಳನ್ನು ತಪಾಸಣೆ ನಡೆಸಿ ರದ್ದುಪಡಿಸುವ ಪ್ರಕ್ರಿಯೆ ಮುಂದುವರೆಸಲಾಗುವುದು ಎಂದು ತಿಳಿಸಿದರು.

2022ರಿಂದ ಈವರೆಗೆ ಮದುವೆ ಧನ ಸಹಾಯಕ್ಕಾಗಿ 1,57,174 ಅರ್ಜಿಗಳು ಬಂದಿದ್ದು, 1,06,091 ಅರ್ಜಿಗಳನ್ನು ಮಂಜೂರು ಮಾಡಲಾಗಿದೆ. ತಿರಸ್ಕರಿಸಿದ ಅರ್ಜಿಗಳಿಗೆ ಸಹಕಾರಣವನ್ನು ನಮೂದಿಸಲಾಗಿರುತ್ತದೆ ಎಂದು ಸದಸ್ಯರ ಮತ್ತೊಂದು ಪ್ರಶ್ನೆಗೆ ಅವರು ಉತ್ತರಿಸಿದರು.

ಇನ್ನೂ ಕೆಲದಿನಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸೇವಾ ಕೇಂದ್ರಗಳನ್ನು ಶೀಘ್ರ ಆರಂಭಿಸಲಾಗುತ್ತಿದ್ದು, ಅವುಗಳಿಗೆ ಒದಗಿಸಲಾಗಿರುವ ವಾಹನಗಳ ಮೂಲಕ ಅರ್ಜಿ ಸಲ್ಲಿಸಿದವರ ಮನೆಗೆ ತೆರಳಿ ಪರಿಶೀಲಿಸಿ ಶಿಫಾರಸ್ಸು ಮಾಡಲಾಗುತ್ತದೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News