ವಾಲ್ಮೀಕಿ ನಿಗಮದಲ್ಲಿ ಹಗರಣ | ತನಿಖೆ ಸಿಬಿಐಗೆ ವರ್ಗಾವಣೆ ಕೋರಿ ಯೂನಿಯನ್ ಬ್ಯಾಂಕ್ ರಿಟ್ ಅರ್ಜಿ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2024-07-23 12:33 IST
ವಾಲ್ಮೀಕಿ ನಿಗಮದಲ್ಲಿ ಹಗರಣ | ತನಿಖೆ ಸಿಬಿಐಗೆ ವರ್ಗಾವಣೆ ಕೋರಿ ಯೂನಿಯನ್ ಬ್ಯಾಂಕ್ ರಿಟ್ ಅರ್ಜಿ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್
  • whatsapp icon

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾವಣೆ ಕೋರಿ ಯೂನಿಯನ್ ಬ್ಯಾಂಕ್ ರಿಟ್ ಅರ್ಜಿ ಸಲ್ಲಿಸಿದೆ.

ಯೂನಿಯನ್ ಬ್ಯಾಂಕ್ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಯೂನಿಯನ್ ಬ್ಯಾಂಕ್ ಪರ ಅಟಾರ್ನಿ ಜನರಲ್ ವೆಂಕಟರಮಣಿ ಹಾಜರಾಗಿ 50 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ಹಗರಣವಾಗಿದ್ದರೆ ಸಿಬಿಐ ತನಿಖೆ ನಡೆಸಬೇಕು. ಆದರೆ ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬ್ಯಾಂಕ್ ಹಗರಣಗಳ ತನಿಖೆಗೆ ಅಂತರರಾಷ್ಟ್ರೀಯ ಪ್ರಾಮುಖ್ಯತೆ ಇದೆ. ರಾಜ್ಯ ಸರಕಾರ, ಸ್ಥಳೀಯ ಪೊಲೀಸರು ತನಿಖೆ ನಡೆಸಬಾರದು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪರ ಅಟಾರ್ನಿ ಜನರಲ್ ವಾದ ಮಂಡಿಸಿದರು.

ವಾದ ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠ ರಾಜ್ಯ ಸರಕಾರ, ಪೊಲೀಸರಿಗೆ ನೋಟಿಸ್ ನೀಡಿದೆ. ಅಲ್ಲದೆ ಮಹರ್ಷಿ ವಾಲ್ಮೀಕಿ ನಿಗಮಕ್ಕೂ ಹೈಕೋರ್ಟ್ ನೋಟಿಸ್ ನೀಡಿ, ವಿಚಾರಣೆಯನ್ನು ಆಗಸ್ಟ್ 7ಕ್ಕೆ ನಿಗದಿಪಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News