ಖ್ಯಾತ ವಿಜ್ಞಾನಿ ಕಸ್ತೂರಿರಂಗನ್ ಅವರಿಗೆ ಹೃದಯಾಘಾತ; ಶ್ರೀಲಂಕಾದಿಂದ ಇಂದು ಬೆಂಗಳೂರಿಗೆ ಏರ್‌ಲಿಫ್ಟ್
Update: 2023-07-10 11:37 GMT
ಬೆಂಗಳೂರು: ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮುಖ್ಯಸ್ಥರಾಗಿ ಒಂದು ದಶಕದಷ್ಟು ಸಮಯ ಸೇವೆ ಸಲ್ಲಿಸಿದ್ದ ಭಾರತದ ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಡಾ ಕೃಷ್ಣಸ್ವಾಮಿ ಕಸ್ತೂರಿರಂಗನ್ ಅವರು ಶ್ರೀಲಂಕಾ ಪ್ರವಾಸದಲ್ಲಿರುವಾಗ ಹೃದಯಾಘಾತಕ್ಕೊಳಗಾಗಿದ್ದಾರೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಇಂದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಏರ್‌ಲಿಫ್ಟ್ ಮಾಡಲಾಗುತ್ತಿದೆ.
83 ವರ್ಷದ ಕಸ್ತೂರಿರಂಗನ್ ಅವರು ಪದ್ಮ ಶ್ರೀ, ಪದ್ಮ ಭೂಷಣ, ಪದ್ಮ ವಿಭೂಷಣ ಪ್ರಶಸ್ತಿ ವಿಜೇತರಾಗಿದ್ದಾರೆ.
ರಾಜಸ್ಥಾನದ ಕೇಂದ್ರೀಯ ವಿವಿ, ಜೆಎನ್‌ಯು ಹಾಗೂ ಎನ್‌ಐಐಟಿ ವಿವಿಯ ಕುಲಪತಿ ಆಗಿಯೂ ಸೇವೆ ಸಲ್ಲಿಸಿರುವ ಕಸ್ತೂರಿರಂಗನ್ ಅವರು ಕರ್ನಾಟಕ ಜ್ಞಾನ ಆಯೋಗದ ಮಾಜಿ ಅಧ್ಯಕ್ಷರಾಗಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳೂ ಕಸ್ತೂರಿರಂಗನ್ ಅವರ ಆರೋಗ್ಯ ಪರಿಸ್ಥಿತಿ ಕುರಿತು ನಿಗಾ ವಹಿಸಿವೆ ಎಂದು ಟ್ವೀಟ್ ಮೂಲಕ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.