ಮಾ.20ಕ್ಕೆ ಅಭ್ಯರ್ಥಿಗಳ ಎರಡನೇ ಪಟ್ಟಿ ಅಂತಿಮ ಸಾಧ್ಯತೆ: ಡಿಸಿಎಂ ಡಿ.ಕೆ.ಶಿವಕುಮಾರ್

Update: 2024-03-17 14:52 GMT

ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಮಾ.20ಕ್ಕೆ ಅಂತಿಮಗೊಳ್ಳುವ ಸಾಧ್ಯತೆಗಳಿವೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ರವಿವಾರ ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಮಾ.19ರಂದು ಸಿಇಸಿ ಸಭೆ ನಡೆಯಲಿದ್ದು, ಮಾ.20ರಂದು ಅಭ್ಯರ್ಥಿಗಳ 2ನೇ ಪಟ್ಟಿ ಅಂತಿಮವಾಗುವ ಸಾಧ್ಯತೆಯಿದೆ ಎಂದು ಹೇಳಿದರು.

ಇನ್ನು ರಾಜ್ಯದಲ್ಲಿ ತಾಲೂಕು, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರುಗಳ ಸಭೆಯನ್ನು ಮಾ.21ರಂದು ನಡೆಸಲಿದ್ದೇವೆ. ಇವರೆಲ್ಲರಿಗೂ ಲೋಕಸಭೆ ಚುನಾವಣೆಯ ಜವಾಬ್ದಾರಿ ನೀಡಲಾಗುವುದು ಎಂದು ಅವರು ಹೇಳಿದರು.

ಪ್ರಧಾನಿ ಮೋದಿ ಅವರಿಗೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಭಯ. ಹೀಗಾಗಿ ಅವರ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದಾರೆ. ನಾವು ಕಲಬುರಗಿ ಸೇರಿದಂತೆ ರಾಜ್ಯದ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News