ದ್ವಿತೀಯ ಪಿಯುಸಿ ಪರೀಕ್ಷೆ-2 | ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸಾರಿಗೆ ಬಸ್‍ಗಳಲ್ಲಿ ಉಚಿತ ಪ್ರಯಾಣ

Update: 2024-04-25 13:43 GMT

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ-2 ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಬಸ್‍ಗಳಲ್ಲಿ ಉಚಿತ ಪ್ರಯಾಣ ಮಾಡಲು ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ನಿಗಮಗಳ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕರ್ನಾಟಕದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳು ಎ.29ರಿಂದ ಪ್ರಾರಂಭವಾಗಲಿವೆ. ದ್ವಿತೀಯ ಪಿಯುಸಿ ಪರೀಕ್ಷಾ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲ ಮಾರ್ಗಗಳನ್ನು ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸಲಾಗುವುದು. ಹೆಚ್ಚುವರಿ ಸುತ್ತುವಳಿಗಳ ಕಾರ್ಯಾಚರಣೆಯ ಅಗತ್ಯತೆ ಕಂಡುಬಂದಲ್ಲಿ ಅದನ್ನು ಕಾರ್ಯಗತಗೊಳಿಸಲಾಗುವುದು.

ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು/ಪೋಷಕರು ನಿಲುಗಡೆಗೆ ಕೋರಿದಲ್ಲಿ ಅದನ್ನು ಕಲ್ಪಿಸಿಕೊಡಲಾಗುವುದು ಮತ್ತು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸೌಜನ್ಯಯುತವಾಗಿ ವರ್ತಿಸಬೇಕು ಎಂದು ಚಾಲನಾ ಸಿಬ್ಬಂದಿಗಳಿಗೆ ತಿಳಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News