ರಾಜಕೀಯವಾಗಿ ವಿರೋಧಿಗಳಾಗಿದ್ದರೂ ಬೀದಿಯಲ್ಲಿ ನಿಂತ ಬಿಜೆಪಿ ನಾಯಕರ ದುರಾವಸ್ಥೆ ನೋಡಿ ಕರುಣೆ ಹುಟ್ಟುತ್ತಿದೆ: ಸಚಿವ ಪ್ರಿಯಾಂಕ್‌ ಖರ್ಗೆ

Update: 2023-08-26 07:36 GMT

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಇಸ್ರೋ ಕೆಂದ್ರಕ್ಕೆ ಭೇಟಿ ನೀಡಲು ನಗರಕ್ಕೆ ಆಗಮಿಸಿದ್ದು, ಈ ವೇಳೆ ಬ್ಯಾರಿಕೇಡ್ ಹಿಂದೆ ನಿಂತ ಬಿಜೆಪಿಯ ನಾಯಕರ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. 

ಈ ಕುರಿತು ಪ್ರತಿಕ್ರಿಯಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವ ಪ್ರಿಯಾಂಕ್‌ ಖರ್ಗೆ, ʼʼರಾಜಕೀಯವಾಗಿ, ಸೈದ್ದಂತಿಕವಾಗಿ ವಿರೋಧಿಗಳಾಗಿದ್ದರೂ ಬಿಜೆಪಿ ನಾಯಕರ ದುರಾವಸ್ಥೆ ನೋಡಿ ಕರುಣೆ ಹುಟ್ಟುತ್ತಿದೆʼʼ ಎಂದು ಟ್ವಿಟರ್‌ ನಲ್ಲಿ ಬಿಜೆಪಿ ನಾಯಕರ ಫೋಟೊ ಹಂಚಿಕೊಂಡಿದ್ದಾರೆ. 

ʼʼಪ್ರಧಾನಿ ಮುಂದೆ ಬ್ಯಾರಿಕೆಡ್ ಬಂಧಿಗಳಾಗಿ ಗಮನ ಸೆಳೆಯಲು ಹರಸಾಹಸ ಮಾಡುತ್ತಿರುವ ಬಿಜೆಪಿ ನಾಯಕರು ಸ್ವಾಭಿಮಾನ, ಆತ್ಮಗೌರವವನ್ನು ಬೀದಿಪಾಲು ಮಾಡಿಕೊಂಡಿದ್ದು ಕರುಣಾಜನಕವಾಗಿದೆ. ಹೈಕಮಾಂಡ್‌ನಿಂದ ಇಷ್ಟೊಂದು ತಿರಸ್ಕಾರಕ್ಕೆ ಒಳಪಟ್ಟಿರುವಾಗ "ವಿರೋಧ ಪಕ್ಷದ ನಾಯಕ"ನ ಆಯ್ಕೆ ಸಾಧ್ಯವಾಗುವುದೇ?ʼʼ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ. 

"ಈಗ ಸ್ವತಃ ಬಿಜೆಪಿಗರೂ ಸರ್ವಾಧಿಕಾರದ ಸಂತ್ರಸ್ತರಾಗಿದ್ದಾರೆ. ಬೀದಿಯಲ್ಲಿ ನಿಂತ ಬಿಜೆಪಿ ನಾಯಕರು ತಮ್ಮನ್ನು ತಾವೇ ಅವಮಾನಿಸಿಕೊಂಡಿದ್ದಲ್ಲ, ಇದು ಮತ ನೀಡಿದ ಮತದಾರರಿಗೆ ಅವಮಾನ, ಕನ್ನಡಿಗರಿಗೆ ಅವಮಾನ, ಕಾರ್ಯಕರ್ತರಿಗೆ ಅವಮಾನʼʼ ಎಂದು ಪ್ರಿಯಾಂಕ್‌ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News