ಅಧಿವೇಶನ | ಉತ್ತರ ಕರ್ನಾಟಕ್ಕೆ ಪ್ರತ್ಯೇಕ ಬಜೆಟ್ ಮಂಡಿಸಲು ಆಗ್ರಹ

Update: 2025-03-19 18:08 IST
ಅಧಿವೇಶನ | ಉತ್ತರ ಕರ್ನಾಟಕ್ಕೆ ಪ್ರತ್ಯೇಕ ಬಜೆಟ್ ಮಂಡಿಸಲು ಆಗ್ರಹ
  • whatsapp icon

ಬೆಂಗಳೂರು : ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒತ್ತು ನೀಡುವ ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಬಜೆಟ್‍ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ದಿನಗಳಲ್ಲಿ ಮಂಡಿಸಲಿ ಎಂದು ಜೆಡಿಎಸ್ ಸದಸ್ಯ ಶರಣಗೌಡ ಕಂದಕೂರ ಒತ್ತಾಯಿಸಿದ್ದಾರೆ.

ಬುಧವಾರ ವಿಧಾನಸಭೆಯಲ್ಲಿ ಪ್ರಸ್ತುತ ಸಾಲಿನ ಆಯವ್ಯಯ ಅಂದಾಜುಗಳ ಮೇಲಿನ ಸಾಮಾನ್ಯ ಚರ್ಚೆಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಇದೆ. ನಮ್ಮ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳು ಆಗಿಲ್ಲ. ಹಾಗಾಗಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪ್ರತ್ಯೇಕ ಬಜೆಟ್‍ನ್ನು ಮಂಡಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

ಗ್ಯಾರೆಂಟಿಗಳಿಗೆ ನಮ್ಮ ವಿರೋಧವಿಲ್ಲ. ಆದರೆ ದುಡಿಯುವ ಕೈಗಳಿಗೆ ಕೆಲಸ ಕೊಡಿ, ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಸ್ವಸಹಾಯ ಸಂಘಗಳಿಗೆ ಹೆಚ್ಚಿನ ನೆರವು ನೀಡಿ ಎಂದು ಒತ್ತಾಯಿಸಿದರು.

ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹೆಚ್ಚು ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗುತ್ತಿವೆ. ಈ ಬಗ್ಗೆ ಸರಕಾರ ಗಮನ ಹರಿಸಬೇಕು. ಜನ ದುಡಿದಿದ್ದೆಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಇಡುತ್ತಿದ್ದಾರೆ. ಹಾಗಾಗಿ ಈ ಭಾಗದಲ್ಲಿ ಆಸ್ಪತ್ರೆಗಳನ್ನು ಸಶಕ್ತಗೊಳಿಸಿ, ಹಾಗೆಯೇ ಬಡ ಮಕ್ಕಳಿಗೆ ಉಚಿತ ಶಿಕ್ಷಣವನ್ನು ಜಾರಿ ಮಾಡಿ ಎಂದು ಅವರು ಸದನದ ಗಮನ ಸೆಳೆದರು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News