ಲೈಂಗಿಕ ದೌರ್ಜನ್ಯ ಪ್ರಕರಣ | ನಿರೀಕ್ಷಣಾ ಜಾಮೀನು ಕೋರಿ ಎಚ್.ಡಿ.ರೇವಣ್ಣ ಕೋರ್ಟ್ ಮೊರೆ

Update: 2024-05-02 12:32 GMT

ಎಚ್.​ಡಿ.ರೇವಣ್ಣ

ಬೆಂಗಳೂರು : ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಮೊದಲ ಆರೋಪಿ ಮಾಜಿ ಸಚಿವ, ಜೆಡಿಎಸ್​ ಶಾಸಕ ಎಚ್.​ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್​ ಮೆಟ್ಟಿಲೇರಿದ್ದಾರೆ.

ಈ ಸಂಬಂಧ ಆರೋಪಿ ಎಚ್​ ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ ಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ.  ಎಸ್​ಐಟಿ ಈಗಾಗಲೇ ಈ ಪ್ರಕರಣ ತನಿಖೆಯನ್ನು ಚುರುಕುಗೊಳಿಸಿದ್ದು, ಮಹತ್ವದ ಮಾಹಿತಿ ಕಲೆಹಾಕುತ್ತಿದೆ. ಅಲ್ಲದೇ ವಿಚಾರಣೆಗೆ ಹಾಜರಾಗುವಂತೆ ರೇವಣ್ಣ ಮತ್ತು ಪ್ರಜ್ವಲ್​ಗೆ ನೋಟಿಸ್ ಜಾರಿ ಮಾಡಿದೆ.

ಇದರ ಬೆನ್ನಲ್ಲೇ ರೇವಣ್ಣ ಕೋರ್ಟ್​ ಮೆಟ್ಟಿಲೇರಿದ್ದಾರೆ. ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ಈ ದೂರಿನ ಅನ್ವಯ ಪ್ರಜ್ವಲ್ ರೇವಣ್ಣ ಮತ್ತು ತಂದೆ ಎಚ್​ಡಿ ರೇವಣ್ಣ ಅವರ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಇನ್ನು ಈ ಪ್ರಕರಣದಲ್ಲಿ ಎಚ್​ಡಿ ರೇವಣ್ಣ ಎ1 ಆರೋಪಿಯಾಗಿದ್ದರೆ, ಪುತ್ರ ಎ2 ಆರೋಪಿಯಾಗಿದ್ದಾರೆ. ಇನ್ನು ಈ ಪ್ರಕರಣದ ಎಸ್​ಐಟಿ ತನಿಖೆ ನಡೆಸಿದ್ದು, ಈಗಾಗಲೇ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಹೀಗಾಗಿ ಕೋರ್ಟ್ ಮೊರೆಹೋಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News