ಕವಿತಾ ಲಂಕೇಶ್ ಅಧ್ಯಕ್ಷತೆಯಲ್ಲಿ ʼಲೈಂಗಿಕ ದೌರ್ಜನ್ಯ ತಡೆʼ ಸಮಿತಿ ರಚಿಸಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗಟ್ಟಲು ಹಿರಿಯ ನಿರ್ದೇಶಕಿ ಕವಿತಾ ಲಂಕೇಶ್ ಅವರ ಅಧ್ಯಕ್ಷತೆಯಲ್ಲಿ ಲೈಂಗಿಕ ದೌರ್ಜನ್ಯ ತಡೆ(ಆಂತರಿಕ ದೂರು ಸಮಿತಿ) ಸಮಿತಿಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ರಚಿಸಿದೆ.
ಸಮಿತಿಯ ಖಾಯಂ ಸದಸ್ಯರಾಗಿ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ.ಸುರೇಶ್ ಇದ್ದು, ಈ ಸಮಿತಿಯಲ್ಲಿ ಹಿರಿಯ ನಟಿ ಪ್ರಮೀಳಾ ಜೋಶಾಯ್, ಮಹಿಳಾ ಹಕ್ಕುಗಳ ಹೋರಾಟಗಾರ್ತಿ ವಿಮಲಾ ಕೆ.ಎಸ್., ಹಿರಿಯ ವಕೀಲೆ ರಾಜಲಕ್ಷ್ಮೀ ಅಂಕಲಗಿ, ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಹೋರಾಟಗಾರ್ತಿ ಮಲ್ಲು ಕುಂಬಾರ್, ನಟಿ ಶೃತಿ ಹರಿಹರನ್, ಹಿರಿಯ ಪತ್ರಕರ್ತ ಮುರುಳೀಧರ್ ಖಜಾನೆ, ರಂಗಕರ್ಮಿ ಶಶಿಕಾಂತ್ ಯಡಹಳ್ಳಿ, ನಿರ್ಮಾಪಕ ಸಾರಾ ಗೋವಿಂದ್ ಅವರು ಸದಸ್ಯರಾಗಿದ್ದಾರೆ.
ಕೇರಳ ಚಿತ್ರರಂಗದ ಲೈಂಗಿಕ ದೌರ್ಜನ್ಯದ ಕುರಿತು ನ್ಯಾ. ಹೇಮಾ ಸಮಿತಿ ವರದಿ ನೀಡಿದ ಬಳಿಕ, ಕರ್ನಾಟಕದಲ್ಲಿ ಸಹ ಸಮಿತಿ ರಚಿಸಬೇಕು ಎಂಬ ಕೂಗು ಎದ್ದಿತ್ತು. ಇದೀಗ, ಚಲನಚಿತ್ರ ವಾಣಿಜ್ಯ ಮಂಡಳಿಯು ಸಮಿತಿಯನ್ನು ರಚನೆ ಮಾಡಿದೆ.