ರನ್ಯಾ ರಾವ್ ಪ್ರಕರಣ | ಇಬ್ಬರು ಸಚಿವರು ಭಾಗಿಯಾಗಿದ್ದಾರೆಂಬುದು ಸುಳ್ಳು: ಶರಣ ಪ್ರಕಾಶ್ ಪಾಟೀಲ್
Update: 2025-03-15 21:11 IST

ಶರಣ ಪ್ರಕಾಶ್ ಪಾಟೀಲ್
ಬೆಂಗಳೂರು: ‘ನಟಿ ರನ್ಯಾ ರಾವ್ ಚಿನ್ನ ಕಳ್ಳ ಸಾಗಾಣೆ ಪ್ರಕರಣದಲ್ಲಿ ರಾಜ್ಯದ ಇಬ್ಬರು ಸಚಿವರು ಭಾಗಿಯಾಗಿದ್ದಾರೆಂಬುದು ಸುಳ್ಳು. ಬಹುಶಃ ಕೇಂದ್ರ ಸಚಿವರು ಭಾಗಿಯಾಗಿರಬಹುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಇಂದಿಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಶನಿವಾರ ಕಲಬುರಗಿಯಲ್ಲಿ ಮಾತನಾಡಿದ ಅವರು, ರನ್ಯಾರಾವ್ ಪ್ರಕರಣದಲ್ಲಿ ರಾಜ್ಯದ ಸಚಿವರ ಪಾತ್ರ ಇರಲು ಹೇಗೆ ಸಾಧ್ಯವಿದೆ. ದೇಶದ ಎಲ್ಲ ವಿಮಾನ ನಿಲ್ದಾಣಗಳು ಕೇಂದ್ರ ಸರಕಾರದ ಅಧೀನದಲ್ಲಿ ಬರುತ್ತವೆ. ಇದನ್ನು ತಪ್ಪಾಗಿ ಅಂದಾಜಿಸಿ ರಾಜ್ಯದ ಸಚಿವರ ವಿರುದ್ಧ ಆರೋಪ ಮಾಡಿರಬಹುದು ಎಂದು ಹೇಳಿದರು.
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಮುಂದಿನ ಕೆಲವೇ ದಿನಗಳಲ್ಲಿ ಕಲಬುರಗಿ ನಗರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ ನೆರವೇರಿಸಲಾಗುವುದು. ಎಐಐಸಿಸಿ ಅಧ್ಯಕ್ಷರನ್ನು ಆಹ್ವಾನಿಸಲಾಗುವುದು. ಅದಕ್ಕಾಗಿ ಅವರ ಸಮಯ ಕೇಳಲಾಗಿದೆ ಎಂದರು.